ಕ್ರೀಡೆ

ಭಾರತವನ್ನು ಸೋಲಿಸುವ ತಂಡ ಈ ಬಾರಿ ವಿಶ್ವಕಪ್‌ ಗೆಲ್ಲಲಿದೆ: ಮೈಕಲ್‌ ವಾನ್‌

ನವದೆಹಲಿ : ರೋಹಿತ್‌ ಶರ್ಮಾ ನಾಯಕತ್ವದ ಭಾರತವನ್ನು ಸೋಲಿಸುವ ತಂಡ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕಲ್‌ ವಾನ್‌ ಭವಿಷ್ಯ ನುಡಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 399 ರನ್‌ಗಳನ್ನು ಕಲೆ ಹಾಕಿದ ಬಳಿಕ ವಾನ್ ಈ ಹೇಳಿಕೆ ನೀಡಿದ್ದಾರೆ.

ಇಂದೋರ್‌ನ ಹೋಳ್ಕರ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ಅದ್ಭುತ ಪ್ರದರ್ಶನ ತೋರಿತು. ಶುಭಮನ್ ಗಿಲ್ ಹಾಗೂ ಶ್ರೇಯಸ್‌ ಅಯ್ಯರ್ ಅವರ ಶತಕಗಳ ಬಲದಿಂದ ಟೀಮ್‌ ಇಂಡಿಯಾ 399 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 400 ರನ್‌ಗಳ ಗುರಿಯನ್ನು ನೀಡಿತು.

ಬಳಿಕ ಗುರಿ ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ 28.2 ಓವರ್‌ಗಳಿಗೆ 217 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ 99 ರನ್‌ಗಳಿಂದ ಸೋಲು ಅನುಭವಿಸಿತು. ಈ ಪಂದ್ಯದ ಗೆಲುವಿನ ಮೂಲಕ ಟೀಮ್‌ ಇಂಡಿಯಾ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ 2-0 ಅಂತರದಲ್ಲಿ ಏಕದಿನ ಸರಣಿಯನ್ನು ವಶಪಡಿಸಿಕೊಂಡಿತು.

ಮೈಕಲ್‌ ವಾನ್‌ ಕೊಟ್ಟ ಹೇಳಿಕೆ : ಭಾರತ ತಂಡದ ಬ್ಯಾಟಿಂಗ್‌ಗೆ ಮೈಕಲ್‌ ವಾನ್‌ ಆಕರ್ಷಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟೀಮ್ ಇಂಡಿಯಾವನ್ನು ಶ್ಲಾಘಿಸಿದ್ದಾರೆ. ಈ ಬಾರಿ ಭಾರತವನ್ನು ಸೋಲಿಸುವ ತಂಡ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ದೊಡ್ಡ ಭವಿಷ್ಯ ನುಡಿದಿದ್ದಾರೆ. ವಾನ್‌ ಟ್ವೀಟ್‌ಗೆ ಅಭಿಮಾನಿಗಳು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

“ಭಾರತವನ್ನು ಸೋಲಿಸುವ ತಂಡ ಈ ಬಾರಿ ಏಕದಿನ ವಿಶ್ವಕಪ್‌ ಮುಡಿಗೇರಿಸಿಕೊಳ್ಳಲಿದೆ ಎಂಬ ಬಗ್ಗೆ ನನಗೆ ಖಚಿತತೆ ಇದೆ. ಭಾರತದ ಪಿಚ್‌ಗಳಲ್ಲಿ ಟೀಮ್‌ ಇಂಡಿಯಾ ಬ್ಯಾಟಿಂಗ್ ಲೈನ್ ಅಪ್ ಹಾಸ್ಯಾಸ್ಪದವಾಗಿದೆ…ಇದರ ಜೊತೆಗೆ ಭಾರತ ತಂಡದಲ್ಲಿ ಬೌಲಿಂಗ್‌ ಸಂಯೋಜನೆ ಸಂಪೂರ್ಣವಾಗಿದೆ. ಆದರೆ, ಒತ್ತಡದ ಮೂಲಕ ಭಾರತ ತಂಡವನ್ನು ಎದುರಾಳಿ ತಂಡಗಳು ನಿಯಂತ್ರಿಸಬಹುದು,” ಎಂದು ಮೈಕಲ್‌ ವಾನ್‌ ಟ್ವೀಟ್‌ ಮಾಡಿದ್ದಾರೆ.

https://x.com/MichaelVaughan/status/1705922228842291389?s=20

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

13 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

14 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

15 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

16 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

19 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

19 hours ago