ಮೈಸೂರು : ಐಸಿಸಿ ಏಕದಿನ ವಿಶ್ವಕಪ್ 2023 ಅಂತಿಮಘಟ್ಟ ತಲುಪಿದ್ದು, ಇದರೊಂದಿಗೆ ಹಲವಾರು ವಿಶೇಷ ದಾಖಲೆಗಳು ಸಹಾ ಮೂಡಿಬಂದಿವೆ.
ಇದರೊಂದಿಗೆ ಈ ಬಾರಿಯ ವಿಶ್ವಕಪ್‌ನಲ್ಲಿ ದಾಖಲಾದ ವಿಶೇಷ ದಾಖಲೆಗಳನ್ನು ಮಾಡಿರುವ ಕುರಿತು ಚುಟುಕು ಮಾಹಿತಿ ಇಲ್ಲಿದೆ.
ದಾಖಲೆ : ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಒಟ್ಟು 51 ಸಿಕ್ಸರ್ ಬಾರಿಸಿರುವ ಹಿಟ್‌ಮ್ಯಾನ್ ವಿಶ್ವಕಪ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿರುವ ಆಟಗಾರ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. ರೋಹಿತ್ ಶರ್ಮಾ 7 ಶತಕ ಬಾರಿಸಿ ಅತಿಹೆಚ್ಚು ಶತಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದಾರೆ.
ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಬಾರಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. 711 ರನ್‌ಗಳನ್ನು ಈ ಆವೃತ್ತಿಯ ವಿಶ್ವಕಪ್‌ನಲ್ಲಿ ಬಾರಿಸಿರುವ ಕೊಹ್ಲಿ ವಿಶ್ವಕಪ್ ಸೀಸನ್ ಒಂದರಲ್ಲಿ ಅತಿಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಅಲ್ಲದೇ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ಬಾರಿ 50+ ರನ್ ಬಾರಿಸಿದ ಆಟಗಾರ ಎಂಬ ದಾಖಲೆಯನ್ನೂ ಸಹ ಕೊಹ್ಲಿ ಮಾಡಿದ್ದಾರೆ. ಕೊಹ್ಲಿ ಈ ಬಾರಿ ಒಟ್ಟು 8 ಬಾರಿ 50+ ರನ್ ಬಾರಿಸಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ಕೊಹ್ಲಿ ಅತಿಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಮಹಮದ್ ಶಮಿ ವಿಶ್ವಕಪ್‌ನಲ್ಲಿ ಅತಿವೇಗವಾಗಿ 50 ವಿಕೆಟ್ ಪಡೆದ ವೇಗಿ ಎಂಬ ದಾಖಲೆ ಬರೆದಿದ್ದಾರೆ. ಅಲ್ಲದೇ ವಿಶ್ವಕಪ್‌ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಭಾರತೀಯ ಎನಿಸಿಕೊಂಡಿದ್ದಾರೆ. ಇನ್ನು ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಯನ್ನು ಶಮಿ ಮಾಡಿದ್ದಾರೆ. ಅಲ್ಲದೇ ವಿಶ್ವಕಪ್‌ನಲ್ಲಿ ಮೂರು ಬಾರಿ 5 ವಿಕೆಟ್ ಗೊಂಚಲು ಪಡೆದಿರುವ ಶಮಿ ಅತಿಹೆಚ್ಚು ಬಾರಿ 5 ವಿಕೆಟ್‌ಗಳ ಗೊಂಚಲನ್ನು ಪಡೆದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ಈ ಬಾರಿಯ ಆವೃತ್ತಿಯಲ್ಲಿ ಶಮಿ ಅತಿಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಶ್ರೇಯಸ್ ಅಯ್ಯರ್ ವಿಶ್ವಕಪ್ ಆವೃತ್ತಿಯೊಂದರಲ್ಲಿ 500 ಕ್ಕಿಂತ ಹೆಚ್ಚು ರನ್ ಬಾರಿಸಿದ ವಿಶ್ವದ ಮೊದಲ 4ನೇ ಕ್ರಮಾಂಕದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 67 ಎಸೆತಗಳಿಗೆ ಶತಕವನ್ನು ಪೂರೈಸಿದ ಅಯ್ಯರ್ ವಿಶ್ವಕಪ್ ನಾಕ್‌ಔಟ್ ಪಂದ್ಯಗಳಲ್ಲಿ ಅತಿವೇಗದ ಶತಕ ಬಾರಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಅಲ್ಲದೇ ವಿಶ್ವಕಪ್‌ನಲ್ಲಿ ಸತತವಾಗಿ ಎರಡು ಶತಕಗಳನ್ನು ಬಾರಿಸಿದ ಮೂರನೇ ಭಾರತೀಯ ಎಂಬ ಸಾಧನೆ ಮಾಡಿದ್ದಾರೆ.
ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ 62 ಎಸೆತಗಳಿಗೆ ಶತಕ ಬಾರಿಸಿದ ಕೆಎಲ್ ರಾಹುಲ್ ವಿಶ್ವಕಪ್‌ನಲ್ಲಿ ಅತಿ ವೇಗವಾಗಿ ಶತಕ ಬಾರಿಸಿದ ಭಾರತೀಯ ಎಂಬ ದಾಖಲೆ ನಿರ್ಮಿಸಿದರು. ಅಲ್ಲದೇ ವಿಶ್ವಕಪ್‌ನಲ್ಲಿ ರಾಹುಲ್ ದ್ರಾವಿಡ್ ಬಳಿಕ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್ ಎಂಬ ಸಾಧನೆಯನ್ನೂ ಸಹ ಮಾಡಿದರು.
ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ 62 ಎಸೆತಗಳಿಗೆ ಶತಕ ಬಾರಿಸಿದ ಕೆಎಲ್ ರಾಹುಲ್ ಭಾರತ ಪರ ವಿಶ್ವಕಪ್‌ನಲ್ಲಿ ಅತಿ ವೇಗವಾಗಿ ಶತಕ ಬಾರಿಸಿದ ಭಾರತೀಯ ಎಂಬ ದಾಖಲೆ ನಿರ್ಮಿಸಿದರು. ಅಲ್ಲದೇ ವಿಶ್ವಕಪ್‌ನಲ್ಲಿ ರಾಹುಲ್ ದ್ರಾವಿಡ್ ಬಳಿಕ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್ ಎಂಬ ಸಾಧನೆಯನ್ನೂ ಸಹ ಮಾಡಿದರು.
ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್ ಡಿ ಕಾಕ್ ಅವರು ಈ ಸೀಸನ್ ನಲ್ಲಿ 4 ಶತಕಗಳನ್ನು ಸಿಡಿಸಿದ್ದಾರೆ. ಸೌತ್ ಆಫ್ರಿಕಾ ಆಟಗಾರರೊಬ್ಬರು ವರ್ಲ್ಡ್ ಕಪ್ ಸೀಸನ್‌ನಲ್ಲಿ ಗಳಿಸಿದ ಅತಿಹೆಚ್ಚು ಸೆಂಚುರಿ ಎಂಬ ಹೆಗ್ಗಳಿಕೆ ಅವರದ್ದಾಗಿದೆ.
ರಚಿನ್ ರವೀಂದ್ರ ಈ ಟೂರ್ನಿಯ ಎಮರ್ಜಿಂಗ್ ಪ್ಲೇಯರ್ ಎಂದರೇ ಭಾಗಶಃ ತಪ್ಪಾಗಲಾರದು. ತಮ್ಮ ಮೊದಲ ವರರ್ಲ್ಡ್‌ಕಪ್ ಟೂರ್ನಿಯಲ್ಲಿ 3 ಶತಕ ದಾಖಲಿಸಿದ್ದಾರೆ. ವಿಶ್ವಕಪ್‌ನಲ್ಲಿ ಶತಕ ದಾಖಲಿಸಿದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ರಚಿನ್ ಪಾತ್ರರಾಗಿದ್ದಾರೆ. ಈ ಹಿಂದೆ ಈ ದಾಖಲೆ ಸಚಿನ್ ಹೆಸರಿನಲ್ಲಿತ್ತು.
ಗ್ಲೇನ್ ಮ್ಯಾಕ್ಸ್‌ವೆಲ್ ಈ ಟೂರ್ನಿಯಲ್ಲಿ ವಯಕ್ತಿಕ ಗರಿಷ್ಠ ಮೊತ್ತ ದಾಖಲಿಸಿದ್ದಾರೆ. ಅಫ್ಘಾನಿಸ್ಯಾನ ವಿರುದ್ಧ ನಡೆದ ಪಂದ್ಯದಲ್ಲಿ 201ರನ್ ಗಳಿಸುವ ಮೂಲಕ ಈ ಆವೃತ್ತಿಯಲ್ಲಿ ದಾಖಲಾದ ಮೊದಲ ದ್ವಿಶತಕ ಇದಾಗಿದೆ.
ಆಸ್ಟ್ರೇಲಿಯಾ ಆರಂಭಿಕ ಆಟಗಾರ ಡೆವಿಡ್ ವಾರ್ನರ್ ವಿಶ್ವಕಪ್ 2023ರಲ್ಲಿ ಸಚಿನ್ ದಾಖಲೆ ಮುರಿದಿದ್ದಾರೆ. 6 ಶತಕ ಬಾರಿಸುವ ಮೂಲಕ ರಿಕ್ಕಿ ಪಾಂಟಿಂಗ್ ದಾಖಲೆಯನ್ನು ಮುರಿದಿದದಾರೆ. ಸಚಿನ್ ರೊಂದಿಗೆ ಜಂಟಿ ಸ್ಥಾನದಲ್ಲಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…