ಕ್ರೀಡೆ

ತೃತೀಯ ಏಕದಿನ ಪಂದ್ಯ : ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳುವುದೇ ಟೀಂ ಇಂಡಿಯಾ

ಢಾಕಾ: ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋಲುವುದರೊಂದಿಗೆ ಸರಣಿಯನ್ನು ಕಳೆದುಕೊಂಡಿರುವ ಟೀಂ ಇಂಡಿಯಾ ಇಂದು ನಡೆಯಲಿರುವ ಕೊನೆಯ ಏಕದಿನ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳಲು ಮುಂದಾಗಿದೆ.

ಇದರ ಜತೆಗೆ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಉಲ್ಬಣವಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸೇರಿ ಮೂವರು ಆಟಗಾರರು ಗಾಯಗೊಂಡಿದ್ದರು. ಆದ್ದರಿಂದ ಕೊನೆಯ ಏಕದಿನ ಪಂದ್ಯಕ್ಕೆ ತಂಡದಲ್ಲಿ ಬೇರೆ ಮುಖಗಳಿಗೆ ಅವಕಾಶ ಕೊಡಲಾಗಿದೆ.

ಕುಲ್ದೀಪ್ ಯಾದವ್ ಹೊಸದಾಗಿ ತಂಡಕ್ಕೆ ಸೇರಿದ್ದಾರೆ. ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದರೂ
ಎರಡನೇ ಏಕದಿನ ಪಂದ್ಯದಲ್ಲಿ ನೋವಿನ ನಡುವೆ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಲು ಪ್ರಯತ್ನಿಸಿದ್ದರು. ಆದರೆ ಸಹ ಆಟಗಾರರಿಂದ ಸೂಕ್ತ ನೆರವು ದೊರೆಯದೇ ಟೀಂ ಇಂಡಿಯಾ ಸರಣಿ ಸೋತಿತು. ರೋಹಿತ್ ಈಗಾಗಲೇ ತಂಡ ತೊರೆದು ಮುಂಬೈಗೆ ವಾಪಸ್ಸಾಗಿದ್ದಾರೆ. ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಮೊದಲ ಏಕದಿನ ಪಂದ್ಯದಲ್ಲಿ ಬೆನ್ನು ನೋವಿಗೆ ಒಳಗಾಗಿದ್ದರು. ಆದ್ದರಿಂದ ಕುಲದೀಪ್​ಗೆ ಎರಡನೇ ಏಕದಿನ ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು. ಈಗ ಅವರನ್ನು ಸಂಪೂರ್ಣ ಸರಣಿಯಿಂದಲೇ ಕೈಬಿಡಲಾಗಿದೆ.

ವೇಗದ ಬೌಲರ್ ದೀಪಕ್ ಚಹಾರ್ ಕೂಡ ಎರಡನೇ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದು, ಅವರು ಕೂಡ ಸರಣಿಯಿಂದ ಹೊರಗುಳಿದಿದ್ದಾರೆ. ಸರಣಿ ಮಧ್ಯದಲ್ಲಿ ಮೂವರು ಆಟಗಾರರು ಗಾಯಗೊಂಡಿದ್ದರಿಂದ ತಂಡವನ್ನು ಬಲಪಡಿಸುವ ಸಲುವಾಗಿ ಆಯ್ಕೆ ಸಮಿತಿ ಕುಲದೀಪ್ ಯಾದವ್ ಅವರನ್ನು ಕೊನೆಯ ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಿದೆ. ಕೆ.ಎಲ್ ರಾಹುಲ್ ಮೂರನೇ ಏಕದಿನ ಪಂದ್ಯದಲ್ಲಿ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಇಂತಿದೆ.

ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್

andolana

Recent Posts

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

2 hours ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

2 hours ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

2 hours ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

2 hours ago

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

2 hours ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

2 hours ago