ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಬೌಲಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ ಕಾರಣ ೭ ವಿಕೆಟ್‌ಗಳ ಅಂತರದ ಭಾರೀ ಸೋಲು ಅನುಭವಿಸಿತು.
ಆದರೆ ಎರಡನೇ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯ ರದ್ದಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಭಾರತಕ್ಕೆ ಸರಣಿಯನ್ನು ಸಮಬಲಗೊಳಿಸುವ ಅವಕಾಶ ಮಾತ್ರವೇ ಇದೆ. ಭಾರತ ತಂಡ ಈ ಯತ್ನದಲ್ಲಿ ಇದೆ.
ಈ ಸರಣಿಯಲ್ಲಿ ಭಾರತ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಆರಂಭಿಕರಾದ ಶುಭಮನ್ ಗಿಲ್, ಶಿಖರ್ ಧವನ್ ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್ ಮೊದಲಾದ ಆಟಗಾರರ ಬ್ಯಾಟಿಂಗ್‌ನಿಂದ ಉತ್ತಮವಾಗಿ ರನ್‌ಗಳು ಹರಿದುಬಂದಿದೆ. ಆದರೆ ಯುವ ಬೌಲಿಂಗ್ ವಿಭಾಗ ಮಾತ್ರ ಮಿಂಚುವಲ್ಲಿ ವಿಫಲವಾಗಿದೆ. ಆದರೆ ಪ್ರತಿಭಾನ್ವಿತ ಆಟಗಾರರ ಬಳಗವನ್ನು ಆತಿಥೇಯ ಕಿವೀಸ್ ಪಡೆ ನಿರ್ಲಕ್ಷಿಸುವಂತಿಲ್ಲ ಎಂಬುದು ನಿಜ.
ಪಿಚ್ ರಿಪೋರ್ಟ್
ಇಲ್ಲಿ ಕಳೆದ ಐದು ಏಕದಿನ ಪಂದ್ಯಗಳ ಅಂಕಿ-ಅಂಶವನ್ನು ನೋಡಿದಾಗ ಮೊದಲ ಇನ್ನಿಂಗ್ಸ್‌ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ ೨೬೧ ಆಗಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿ ವೇಗಿಗಳು ಶೇ.೭೧ರಷ್ಟು ವಿಕೆಟ್ ಪಡೆದುಕೊಂಡಿದ್ದಾರೆ,. ಹೀಗಾಗಿ ಇಲ್ಲಿ ವೇಗದ ಬೌಲಿಂಗ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡುವ ನಿರೀಕ್ಷೆಯಿರುವ ಕಾರಣ ಇಲ್ಲಿ ರನ್ ಬೆನ್ನಟ್ಟುವುದು ಉತ್ತಮ ನಿರ್ಧಾರವಾಗಬಹುದು.
ಸಂಭಾವ್ಯ ತಂಡ
ಭಾರತ: ಶಿಖರ್ ಧವನ್ (ನಾುಂಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್/ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಅರ್ಶ್‌ದೀಪ್ ಸಿಂಗ್, ಉವ್ರಾನ್ ಮಲಿಕ್ ಮತ್ತು ಕುಲದೀಪ್ ಯಾದವ್.
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ವ್ಯಾಟ್ ಹೆನ್ರಿ, ಟಿಮ್ ಸೌಥಿ ಮತ್ತು ಲಾಕಿ ಫರ್ಗುಸನ್.
ಸ್ಥಳ: ಕ್ರೈಸ್ಟ್ ಚರ್ಚ್‌ನ ಹೆಡಿಂಗ್ಲೆ ಓವಲ್
ಸಮಯ: ಮುಂಜಾನೆ ೭ ಗಂಟೆಗೆ ಆರಂಭ
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…