ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಹೀನಾಯ ಪ್ರದರ್ಶನ ತೋರಿದ ನ್ಯೂಜಿಲೆಂಡ್ ತಂಡ ಟಿ20 ವಿಶ್ವಕಪ್ ಸೂಪರ್-8 ಹಂತಕ್ಕೆ ತಲುಪುವಲ್ಲಿ ವಿಫಲವಾಗಿದೆ.
ʼಸಿʼ ಗ್ರೂಪ್‌ನಲ್ಲಿ ತಾವಾಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರ ಬಿದ್ದಿದೆ. ತನ್ನ ಗ್ರೂಪ್‌ನಲ್ಲಿ ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ್, ಪಪುವಾ ನ್ಯೂಗಿನಿ ಹಾಗೂ ಉಗಾಂಡ ತಂಡಗಳಿದ್ದರೂ ಸಹಾ ಈ ಬಾರಿಯ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ಕಿವೀಸ್ ಸೋತಿದೆ.
ಇನ್ನು ಉಗಾಂಡ ವಿರುದ್ಧ ಪಂದ್ಯ ಗೆದ್ದ ನ್ಯೂಜಿಲೆಂಡ್ ತವರಿಗೆ ಮರಳುವ ಮುನ್ನವೇ ತಂಡಕ್ಕೆ ಆಘಾತವಾಗಿದೆ. ತಂಡದ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ತಾವು ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಆಡದಿರುವ ಬಗ್ಗೆ ತಿಳಿಸಿದ್ದಾರೆ.
ಉಗಾಂಡ ವಿರುದ್ಧದ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಬೌಲ್ಟ್, ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದಷ್ಟೆ ಹೇಳಬಲ್ಲೇ ಎಂದು ಹೇಳಿದ್ದಾರೆ. ಆ ಮೂಲಕ ಮುಂಬರುವ 2026ರ ಟಿ20 ವಿಶ್ವಕಪ್‌ನಲ್ಲಿ ಆಡುವುದಿಲ್ಲ ಎಂಬುದನ್ನು ಸಾಭೀತುಪಡಿಸಿದ್ದಾರೆ.
2011ರ ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್ ಪರವಾಗಿ ಅಂತರಾಷ್ಟ್ರೀಯ ತಂಡಕ್ಕೆ ಪಾದಾರ್ಪಣೆ ಮಾಡಿದ ಇವರು ಈವರೆಗೆ 78 ಟೆಸ್ಟ್ ಪಂದ್ಯಗಳು, 114 ಏಕದಿನ ಪಂದ್ಯ ಹಾಗೂ 60 ಟಿ20 ಪಂದ್ಯಗಳಲ್ಲಿ ತಮ್ಮ ದೇಶವನ್ನು ಪ್ರತಿನಿಧಿಸಿ ಟೆಸ್ಟ್‌ನಲ್ಲಿ 317 ವಿಕೆಟ್, ಏಕದಿನದಲ್ಲಿ 211 ವಿಕೆಟ್ ಹಾಗೂ ಟಿ20 ಮಾದರಿಯಲ್ಲಿ 81 ವಿಕೆಟ್ ಕಬಳಿಸಿ ಕಿವೀಸ್ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.
ಬೌಲ್ಟ್ ಅವರು ತಮ್ಮ ಅತರಾಷ್ಟ್ರೀಯ ತಂಡದ ಕೇಂದ್ರ ಒಪ್ಪಂದದಿಂದ ಹೊರಗುಳಿಯುವ ನಿರ್ಧಾರವನ್ನು 2022 ರಲ್ಲಿ ಸ್ವತಃ ಅವರೇ ಆಯ್ದುಕೊಂಡಿದ್ದರು. ಆದಾದ ಬಳಿಕ ಹಲವಾರು ಕೌಂಟಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸಿರುವ ಅವರು, ವಿಶ್ವದ ಅತಿದೊಡ್ಡ ಚುಟುಕು ಕ್ರಿಕೆಟ್ ಆದ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರವಾಗಿ ಆಡುತ್ತಿದ್ದಾರೆ.
ಇನ್ನು ಒಂಭತ್ತನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಬೋಲ್ಟ್ ಮೂರು ಪಂದ್ಯಗಳಿಂದ 9.29ರ ಸರಾಸರಿಯಲ್ಲಿ 7 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದಾರೆ.
ಇದೇ ಜೂನ್.17 ರಂದು ಲಾರಾ ಕ್ರೀಡಾಂಗಣದಲ್ಲಿ ಪಪುವಾ ನ್ಯೂಗಿನಿ ವಿರುದ್ಧ ನಡೆಯುವ ಪಂದ್ಯ ಬೌಲ್ಟ್‌ನ ಟಿ20 ವಿಶ್ವಕಪ್‌ನಲ್ಲಿನ ಕೊನೆಯ ಪಂದ್ಯವಾಗಲಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…