ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಅಂಡರ್-19 ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ನ ಪರಿಷ್ಕೃತ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.
ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌಥ್ ಆಫ್ರಿಕಾದಲ್ಲಿ ಈ ಟೂರ್ನಿ ನಡೆಯಲಿದೆ. ಈ ಟೂರ್ನಿ ಆಯೋಜಕತ್ವವನ್ನು ಈ ಹಿಂದೆ ಶ್ರೀಲಂಕಾ ಪಡೆದಿತ್ತು. ಆದರೆ, ನವೆಂಬರ್ ನಲ್ಲಿ ಐಸಿಸಿ ಶ್ರೀಲಂಕಾ ಬೋರ್ಡ್‌ನ್ನು ಅಮಾನತುಗೊಳಿಸಿದ ಹಿನ್ನಲೆ 15ನೇ ಆವೃತ್ತಿಯ ಅಂಡರ್-19 ವಿಶ್ವಕಪ್‌ನ್ನು ದಕ್ಷಿಣ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.
ಆತಿಥೇಯ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಜನವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡುವ ಮೂಲಕ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.
ಒಟ್ಟು ಐದು ಸ್ಟೇಡಿಯಂಗಳಲ್ಲಿ ಟೂರ್ನಿ ಆಯೋಜಿಸಲಾಗಿದೆ. ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್ ಮೈದಾನ, ಪೂರ್ವ ಲಂಡನ್‌ನ ಬಫಲೋ ಪಾರ್ಕ್ ಸ್ಟೇಡಿಯಂ, ಕಿಂಬರ್ಲಿಯಲ್ಲಿ ಕಿಂಬರ್ಲಿ ಓವಲ್ ಮೈದಾನ, ಪಾಚೆಫ್‌ಸ್ಟ್ರೂಮ್‌ನ ಜೆಬಿ ಮಾರ್ಕ್ಸ್ ಓವಲ್ ಮತ್ತು ಬೆನೋನಿಯ ವಿಲೋಮೂರ್ ಪಾರ್ಕ್ ಸ್ಟೇಡಿಯಂಗಳಲ್ಲಿ ಒಟ್ಟು 41 ಪಂದ್ಯಗಳು ನಡೆಯಲಿದೆ.
16 ತಂಡಗಳು 4 ಗ್ರೂಪ್: ಅಂಡರ್-19 ವಿಶ್ವಕಪ್ನಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಪ್ರತಿ ಗ್ರೂಪ್ಗಳಲ್ಲಿ ಮೊದಲೆರಡು ಅಗ್ರಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೇರಲಿದೆ.
ಅಂಡರ್-19 ವಿಶ್ವಕಪ್ ಗ್ರೂಪ್ಗಳು:
ಗ್ರೂಪ್-A : ಭಾರತ, ಬಾಂಗ್ಲಾದೇಶ್, ಯುಎಸ್ಎ, ಐರ್ಲೆಂಡ್
ಗ್ರೂಪ್-B : ಇಂಗ್ಲೆಂಡ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್
ಗ್ರೂಪ್-C : ಆಸ್ಟ್ರೇಲಿಯಾ, ಶ್ರೀಲಂಕಾ, ಝಿಂಬಾಬ್ವೆ, ನಮೀಬಿಯಾ
ಗ್ರೂಪ್-D : ಅಫ್ಘಾನಿಸ್ತಾನ್, ಪಾಕಿಸ್ತಾನ್, ನ್ಯೂಝಿಲೆಂಡ್, ನೇಪಾಳ
ಭಾರತ ತಂಡದ ಲೀಗ್ ಹಂತದ ವೇಳಾಪಟ್ಟಿ:
ಜನವರಿ 20- ಭಾರತ vs ಬಾಂಗ್ಲಾದೇಶ್.
ಜನವರಿ 22- ಭಾರತ vs ಐರ್ಲೆಂಡ್.
ಜನವರಿ 28- ಭಾರತ vs ಯುಎಸ್ಎ
ಅಂಡರ್-19 ವಿಶ್ವಕಪ್ ವೇಳಾಪಟ್ಟಿ:
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…