Mysore
27
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

U19 worldcup final: ಫೈನಲ್ ಪಂದ್ಯದ ನೇರ ಪ್ರಸಾರ ಮಾಹಿತಿ!

ಬೆನೋನಿ: ಐಸಿಸಿ ಅಂಡರ್ 19 ವಿಶ್ವಕಪ್ 2024 ರ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ಎದುರಿಸಲಿದೆ. ಎರಡೂ ತಂಡಗಳು ಕ್ರಮವಾಗಿ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧದ ಸೆಮಿಫೈನಲ್‌ನಲ್ಲಿ ರೋಚಕ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟಿವೆ.

ದಕ್ಷಿಣ ಆಫ್ರಿಕಾ ವಿರುದ್ಧ ನಾಯಕ ಉದಯ್ ಸಹರನ್ (81) ಮತ್ತು ಸಚಿನ್ ದಾಸ್ (96) ಅಮೋಘ ಪ್ರದರ್ಶನ ತೋರುವ ಮೂಲಕ ಎರಡು ವಿಕೆಟ್‌ಗಳ ಅಂತರದಿಂದ ಟೀಂ ಇಂಡಿಯಾ ಜಯಶಾಲಿಯಾಯಿತು.

ಮತ್ತೊಂದೆಡೆ, ಪಾಕಿಸ್ತಾನದ ಅಲಿ ರಜಾ ಮಾರಕ ಬೌಲಿಂಗ್‌ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಆಸೀಸ್‌ ಒಂದು ವಿಕೆಟ್ ಉಳಿದಿರುವಂತೆ 179 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ಭಾನುವಾರು (ಫೆ.11) ನಡೆಯುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್‌ ಪಂದ್ಯದಲ್ಲಿ ಗೆದ್ದ ತಂಡ ಪ್ರಶಸ್ತಿ ಜಯಿಸಲಿದೆ.

ಭಾರತ vs ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ U19 ಕ್ರಿಕೆಟ್ ವಿಶ್ವಕಪ್ ಫೈನಲ್ ಭಾನುವಾರ (11 ಫೆಬ್ರವರಿ 2024) ಮಧ್ಯಾಹ್ನ 1:30 ಗಂಟೆಗೆ ನಡೆಯಲಿದೆ.

ಭಾರತ vs ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯ ಬೆನೋನಿಯ ಸಹಾರಾ ಪಾರ್ಕ್ ವಿಲ್ಲೊಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ಆಡಲಿವೆ.

ಭಾರತ vs ಆಸ್ಟ್ರೇಲಿಯಾ ಅಂಡರ್ 19 ವಿಶ್ವಕಪ್ ಫೈನಲ್ ಅನ್ನು ಎಲ್ಲಿ ವೀಕ್ಷಿಸಬೇಕು?
U19 ವಿಶ್ವಕಪ್ ಫೈನಲ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್‌ ಸಹ ಲಭ್ಯವಿರುತ್ತದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!