ಬೆನೋನಿ: ಐಸಿಸಿ ಅಂಡರ್ 19 ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ಎದುರಿಸಲಿದೆ. ಎರಡೂ ತಂಡಗಳು ಕ್ರಮವಾಗಿ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧದ ಸೆಮಿಫೈನಲ್‌ನಲ್ಲಿ ರೋಚಕ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟಿವೆ.
ದಕ್ಷಿಣ ಆಫ್ರಿಕಾ ವಿರುದ್ಧ ನಾಯಕ ಉದಯ್ ಸಹರನ್ (81) ಮತ್ತು ಸಚಿನ್ ದಾಸ್ (96) ಅಮೋಘ ಪ್ರದರ್ಶನ ತೋರುವ ಮೂಲಕ ಎರಡು ವಿಕೆಟ್‌ಗಳ ಅಂತರದಿಂದ ಟೀಂ ಇಂಡಿಯಾ ಜಯಶಾಲಿಯಾಯಿತು.
ಮತ್ತೊಂದೆಡೆ, ಪಾಕಿಸ್ತಾನದ ಅಲಿ ರಜಾ ಮಾರಕ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಆಸೀಸ್ ಒಂದು ವಿಕೆಟ್ ಉಳಿದಿರುವಂತೆ 179 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಭಾನುವಾರು (ಫೆ.11) ನಡೆಯುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯದಲ್ಲಿ ಗೆದ್ದ ತಂಡ ಪ್ರಶಸ್ತಿ ಜಯಿಸಲಿದೆ.
ಭಾರತ vs ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ U19 ಕ್ರಿಕೆಟ್ ವಿಶ್ವಕಪ್ ಫೈನಲ್ ಭಾನುವಾರ (11 ಫೆಬ್ರವರಿ 2024) ಮಧ್ಯಾಹ್ನ 1:30 ಗಂಟೆಗೆ ನಡೆಯಲಿದೆ.
ಭಾರತ vs ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯ ಬೆನೋನಿಯ ಸಹಾರಾ ಪಾರ್ಕ್ ವಿಲ್ಲೊಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ಆಡಲಿವೆ.
ಭಾರತ vs ಆಸ್ಟ್ರೇಲಿಯಾ ಅಂಡರ್ 19 ವಿಶ್ವಕಪ್ ಫೈನಲ್ ಅನ್ನು ಎಲ್ಲಿ ವೀಕ್ಷಿಸಬೇಕು?
U19 ವಿಶ್ವಕಪ್ ಫೈನಲ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಸಹ ಲಭ್ಯವಿರುತ್ತದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…