ಕ್ರೀಡೆ

U19 worldcup: ಟೀಂ ಇಂಡಿಯಾದ ಈವರೆಗಿನ ಸಾಧನೆಯ ಬಗ್ಗೆ ನಿಮಗೆಷ್ಟು ಗೊತ್ತು?

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.

ಪ್ರಶಸ್ತಿಗಾಗಿ ಕಾದಾಡುವ ಈ ಪಂದ್ಯ ಇಂದು (ಫೆ.11) ಮದ್ಯಾಹ್ನ 1.30ಕ್ಕೆ ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆಯಲಿದೆ.

ಈ ಲೀಗ್​ನಲ್ಲಿ ಭಾರತ ಇದುವರೆಗೆ ಆಡಿದ ಎಲ್ಲ ಆರು ಪಂದ್ಯಗಳನ್ನು ಗೆದ್ದು ಫೈನಲ್‌ಗೆ ಅರ್ಹತೆ ಪಡೆದಿದೆ. ಇದರೊಂದಿಗೆ ದಾಖಲೆಯ ಆರನೇ ಬಾರಿಗೆ ವಿಶ್ವಕಪ್ ಗೆಲ್ಲುವ ಆಯದೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುತ್ತಿದೆ.

ಭಾರತ ಈ ಬಾರಿಯ ಫೈನಲ್‌ ಸೇರಿದಂತೆ ಒಟ್ಟು 9 ಬಾರಿ ವಿಶ್ವಕಪ್ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇದರಲ್ಲಿ ಐದು ಬಾರಿ ಚಾಂಪಿನ್ ಪಟ್ಟವನ್ನು ಅಲಂಕರಿಸಿರುವ ಯುವ ಪಡೆ ಮೂರು ಬಾರಿ ರನ್ನರ್ ಅಪ್​ಗೆ ತೃಪ್ತಿ ಪಟ್ಟುಕೊಂಡಿದೆ. ಈ 9 ವಿಶ್ವಕಪ್ ಫೈನಲ್‌ನಲ್ಲಿ ಆರನೆ ಪ್ರಶಸ್ತಿಗೆ ಕಣ್ಣಿಟ್ಟಿದೆ.

ಅಂಡರ್‌ 19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಸಾಧನೆ:

ಈವರೆಗೆ ಆಡಿರುವ ವಿಶ್ವಕಪ್‌ ಟೂರ್ನಿಗಳಲ್ಲಿ ಟೀಂ ಇಂಡಿಯಾ ಒಂಭತ್ತು ಬಾರಿ ಫೈನಲ್‌ಗೆ ಪ್ರವೇಶ ಪಡೆದಿದ್ದು, ಅದರಲ್ಲಿ 5 ಬಾರಿ ಪ್ರಶಸ್ತಿ ಬಾಚಿಕೊಳ್ಳುವಲ್ಲಿ ಯಶಸ್ವಿಯಾದರೇ, ಮೂರು ಬಾರಿ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದೆ. ಇಂದು ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೇ ಆರನೇ ಬಾರಿ ಪ್ರಶಸ್ತಿ ಗೆದ್ದ ಹೆಗ್ಗಳಿಕೆಗೆ ಪಾತ್ರವಾಗಲಿದೆ.

2000: ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ 2000 ಅಂಡರ್-19 ವಿಶ್ವಕಪ್‌ನ ಫೈನಲ್ ಪಂದ್ಯ ನಡೆದಿತ್ತು. ಇದರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದ ಭಾರತ ತಂಡ, ಮಲಿಂತ ಗಜನಾಯಕ ನಾಯಕತ್ವದ ಶ್ರೀಲಂಕಾವನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಮೊದಲ ಬಾರಿಗೆ ವಿಶ್ವಕಪ್ ಎತ್ತಿ ಹಿಡಿದಿತ್ತು. ಲಂಕಾ ನೀಡಿದ್ದ 180 ರನ್‌ಗಳ ಗುರಿ ಬೆನ್ನತ್ತಿದ ಭಾರತ ತಂಡ 40.4 ಓವರ್‌ಗಳಲ್ಲಿ ಕೆವಲ ನಾಲ್ಕು ವಿಕೆಟ್‌ ಕಳೆದುಕೊಂಡು ಗೆದ್ದು ಬೀಗಿತ್ತು.

2006: ಬರೋಬ್ಬರಿ 6 ವರ್ಷಗಳ ನಂತರ ಮತ್ತೊಮ್ಮೆ ವಿಶ್ವಕಪ್‌ ಫೈನಲ್‌ ಪ್ರವೇಶಿಸಿದ್ದ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 38 ರನ್‌ಗಳಿಂದ ಆಘಾತಕಾರಿ ಸೋಲನ್ನು ಅನುಭವಿಸಿತು. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರವಿಕಾಂತ್ ಶುಕ್ಲಾ ನೇತೃತ್ವದ ಭಾರತ ತಂಡ ಸರ್ಫರಾಜ್ ಅಹ್ಮದ್ ಸಾರಥ್ಯದ ಪಾಕಿಸ್ತಾನವನ್ನು 109 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು ಆದರೆ 110 ರನ್ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿ, ಸೋಲನುಭವಿಸಿತು.

2008: ಪುಚೋಂಗ್‌ನ ಕಿನ್ರಾರಾ ಅಕಾಡೆಮಿ ಓವಲ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ, ವೇಯ್ನ್ ಪಾರ್ನೆಲ್ ನಾಯಕತ್ವದ ದಕ್ಷಿಣ ಆಫ್ರಿಕಾವನ್ನು 12 ರನ್‌ಗಳಿಂದ (D/L ವಿಧಾನ) ಸೋಲಿಸಿ, ಎರಡನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿತ್ತು.

2012: ಆಗಸ್ಟ್ 26 ರಂದು ಟೌನ್ಸ್‌ವಿಲ್ಲೆಯ ಟೋನಿ ಐರ್ಲೆಂಡ್ ಕ್ರೀಡಾಂಗಣದಲ್ಲಿ ನಡೆದ ಈ ಫೈನಲ್ ಪಂದ್ಯದಲ್ಲಿ ಉನ್ಮುಕ್ತ್ ಚಾಂದ್ ನಾಯಕತ್ವದ ಭಾರತ ತಂಡ, ನಾಯಕನ ಅಜೇಯ ಶತಕದ ಆಸರೆಯಿಂದ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ವಿಶ್ವಕಪ್ ಎತ್ತಿ ಹಿಡಿದಿತ್ತು.

2016: ಇಶಾನ್ ಕಿಶನ್ ನೇತೃತ್ವದ ಭಾರತ ತಂಡ, ಶಿಮ್ರಾನ್ ಹೆಟ್ಮೆಯರ್ ನಾಯಕತ್ವದ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಐದು ವಿಕೆಟ್‌ಗಳಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಯಿತು. ಢಾಕಾದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 145 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ಮೊದಲ ಬಾರಿಗೆ ಚಾಂಪಿಯನ್ ಆಯಿತು.

2018: 2018 ರ ವಿಶ್ವಕಪ್‌ ಫೈನಲ್​ನಲ್ಲಿ ಮತ್ತೊಮ್ಮೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು . ಮೌಂಟ್ ಮೌಂಗನುಯಿಯಲ್ಲಿರುವ ಬೇ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಪೃಥ್ವಿ ಶಾ ನೇತೃತ್ವದ ಟೀಂ ಇಂಡಿಯಾ, ಜೇಸನ್ ಸಂಘ ನಾಯಕತ್ವದ ಆಸ್ಟ್ರೇಲಿಯವನ್ನು 8 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಜಯಿಸಿತ್ತು.

2020: ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಪಾರ್ಕ್‌ನಲ್ಲಿ ನಡೆದ ಈ ವಿಶ್ವಕಪ್‌ನ ಫೈನಲ್‌ನಲ್ಲಿ ಬಾಂಗ್ಲಾದೇಶ, ಭಾರತವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 47.2 ಓವರ್‌ಗಳಲ್ಲಿ 177 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಏಳು ವಿಕೆಟ್‌ ಕಳೆದುಕೊಂಡು ಗುರಿ ಬೆನ್ನಟ್ಟಿತು.

2022: ಆಂಟಿಗುವಾ ಮತ್ತು ಬಾರ್ಬುಡಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ನಲ್ಲಿ ಯಶ್ ಧುಲ್ ನೇತೃತ್ವದ ಭಾರತ ತಂಡ, ಇಂಗ್ಲೆಂಡ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಇತಿಹಾಸದಲ್ಲಿ ಐದನೇ ಬಾರಿಗೆ ಚಾಂಪಿಯನ್ ಆಯಿತು.

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಈವರೆಗೆ ಫೈನಲ್‌ನಲ್ಲಿ ಎರಡು ಬಾರಿ ಮುಖಾಮುಖಿಯಾಗಿದ್ದು, ಎರಡು ಬಾರಿಯೂ ಟೀಂ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಇದೀಗ ಮೂರನೇ ಬಾರಿಗೆ ಪ್ರಶಸ್ತಿ ಸುತ್ತಿನಲ್ಲಿ ಆಸೀಸ್‌ ತಂಡವನ್ನು ಎದುರಿಸಲಿರುವ ಯುವ ಭಾರತ ತಂಡ, ತನ್ನ ಅಜೇಯ ಓಟವನ್ನು ಮುಂದುವರೆಸಲಿದೆಯೇ ಕಾದು ನೋಡಬೇಕಿದೆ.

andolanait

Recent Posts

ಕಾಂಗ್ರೆಸ್‌ ಸರ್ಕಾರ ರೈತರ ಪರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್‌ ಸರ್ಕಾರ ರೈತರ…

12 mins ago

ಹಾಸನಕ್ಕೆ ಎಚ್‌ಡಿಡಿ ಕುಟುಂಬ ನೀಡಿದ ಕೊಡುಗೆ ಏನೆಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಎಚ್‌ಡಿಕೆ

ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ…

45 mins ago

ಫೇಕ್‌ ಎನ್‌ಕೌಂಟರ್‌: ಪ್ರಹ್ಲಾದ್‌ ಜೋಶಿ ಹೇಳಿಕೆಗೆ ಎಚ್.ಸಿ.ಮಹದೇವಪ್ಪ ತಿರುಗೇಟು

ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್‌ ಎನ್‌ಕೌಂಟರ್‌ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ…

1 hour ago

ಗ್ರೇಟರ್ ಮೈಸೂರು ಯೋಜನೆಗೆ ನವೀನ ಕಾರ್ಯತಂತ್ರ ಅಗತ್ಯ

50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…

2 hours ago

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಎಚ್.ಡಿ.ಕುಮಾರಸ್ವಾಮಿ

ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…

2 hours ago

ಕೈಗಾರಿಕಾ ವಲಯದ ಪ್ರಸ್ತಾವನೆಗಳಿಗೆ ಸಿಎಂ ಅನುಮೋದನೆ

ಬೆಂಗಳೂರು:  ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…

2 hours ago