ಕ್ರೀಡೆ

Under 19‌ ODI worldcup: ಇಂದಿನಿಂದ ಟೀಂ ಇಂಡಿಯಾ ಅಭಿಯಾನ ಆರಂಭ

ಬ್ಲೋಮ್‌ಫಾಂಟೈನ್: ಐದು ಬಾರಿಯ ವಿಶ್ವ ಚಾಂಪಿಯನ್‌ ಭಾರತ ತಂಡ, ಅಂಡರ್‌-19 ವಿಶ್ವಕಪ್‌ ಟೂರ್ನಿಯಲ್ಲಿ ಇಂದು ಮೊದಲ ಪಂದ್ಯ ಆಡಲಿದೆ. ಇಲ್ಲಿನ ಬ್ಲೋಮ್‌ಫಾಂಟೈನ್‌ನ ಮನ್ಗುನ್ಯಾಗ್ ಓವಲ್ ಮೈದಾನದಲ್ಲಿ ಬಾಂಗ್ಲಾದೇಶ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ.‌

ಈ ಪಂದ್ಯವು ಭಾರತೀಯ ಕಾಲಮಾನ ಮದ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಉದಯ್ ಸಹರನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇಂದು ಕಣಕ್ಕಿಳಿಯಲಿದ್ದು, ಆರನೇ ಪ್ರಶಸ್ತಿಯತ್ತ ಚಿತ್ತ ನೆಟ್ಟಿದೆ. 2022 ರಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ಭಾರತವು ದಾಖಲೆಯ 5 ನೇ ಬಾರಿಗೆ ಟ್ರೋಫಿ ಗೆಲ್ಲುವ ಮೂಲಕ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

ಪುರುಷರ 19 ವರ್ಷದೊಳಗಿನವರ ವಿಶ್ವಕಪ್‌ ಟೂರ್ನಿ ಜನವರಿ 19 ರಿಂದ ಆರಂಭವಾಗಿದ್ದು, ದಕ್ಷಿಣ ಆಫ್ರಿಕಾ ಈ ಟೂರ್ನಿಯ ಆತಿಥ್ಯ ವಹಿಸಿದೆ. ವಿಶ್ವಕಪ್‌ ಉದ್ಘಾಟನಾ ಪಂದ್ಯದಲ್ಲಿ ಅಮೆಕರಿಕಾ ವಿರುದ್ಧ ಐರ್ಲೆಂಡ್ 7 ವಿಕೆಟ್​ಗಳಿಂದ ಜಯಿಸಿದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಫ್ರಿಕಾ 31 ರನ್​ಗಳ ಜಯಗಳಿಸಿ ಶುಭಾರಂಭ ಮಾಡಿದೆ.

ಇಂದು (ಜನವರಿ 20) ಮೂರು ಪಂದ್ಯಗಳು ನಡೆಯಲಿವೆ. ಮೊದಲಿಗೆ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ನಂತರ ಸ್ಕಾಟ್ಲೆಂಡ್-ಇಂಗ್ಲೆಂಡ್ ಮತ್ತು ಪಾಕಿಸ್ತಾನ-ಅಫ್ಘಾನಿಸ್ತಾನ ಗೆಲುವಿಗಾಗಿ ಸೆಣೆಸಾಟ ನಡೆಸಲಿದೆ.

ಭಾರತ ಮತ್ತು ಬಾಂಗ್ಲಾ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಬಹುದು.

ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್‌ ಲಭ್ಯವಿರುತ್ತವೆ.

ಟೀಂ ಇಂಡಿಯಾ (ಅಂಡರ್‌-19): ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರನ್ (ನಾಯಕ), ಅರವೆಲ್ಲಿ ಅವ್ನಿಶ್ ರಾವ್ (ವಿಕೆಟ್ ಕೀಪರ್), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನೇಶ್ ಮಹಾಜನ (ವಿಕೆಟ್ ಕೀಪರ್), ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಬಾಂಗ್ಲಾದೇಶ ತಂಡ (ಅಂಡರ್‌-19): ಮಹ್ಫುಜುರ್ ರಹಮಾನ್ ರಬ್ಬಿ (ನಾಯಕ), ಆಶಿಕುರ್ ರೆಹಮಾನ್ ಶಿಬ್ಲಿ, ಜಿಶಾನ್ ಆಲಂ, ಚೌಧರಿ ಮೊಹಮ್ಮದ್ ರಿಜ್ವಾನ್, ಆದಿಲ್ ಬಿನ್ ಸಿದ್ದಿಕ್, ಮೊಹಮ್ಮದ್ ಅಶ್ರಫುಜ್ಜಮಾನ್ ಬೊರಾನೊ, ಅರಿಫುಲ್ ಇಸ್ಲಾಂ, ಶಿಹಾಬ್ ಜೇಮ್ಸ್, ಅಹ್ರಾರ್ ಅಮೀನ್ (ಉಪನಾಯಕ), ಶೇಖ್, ಪರ್ವೇಜ್ ಉಜಿ ರೋಹನತ್ ದೌಲಾ.ಬೋರ್ಸನ್, ಇಕ್ಬಾಲ್ ಹಸನ್ ಎಮನ್, ವಾಸಿ ಸಿದ್ದಿಕಿ, ಮರೂಫ್ ಮೃಧಾ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

5 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

6 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

7 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

10 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

11 hours ago