ಇಂದೋರ್: ಗುಜರಾತ್‌ನ 26 ವರ್ಷದ ಕ್ರಿಕೆಟಿಗ ಉರ್ವಿನ್ ಪಟೇಲ್‌ನನ್ನು ಈ ಬಾರಿಯ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಪ್ರಾಂಚೈಸಿಗಳು ಬಿಡ್ ಮಾಡಲು ಹಿಂದೇಟು ಹಾಕಿದ ಬೆನ್ನಲ್ಲೇ, ಅವರು ಟಿ20 ಟೂರ್ನಿಯಲ್ಲಿ ವೇಗದ ಶತಕ ಸಿಡಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ದೇಶಿಯ ಟೂರ್ನಿಗಳಲ್ಲಿ ಆಡುತ್ತಿರುವ ಉರ್ವಿನ್ ಕಡಿಮೆ ಎಸೆತಗಳಲ್ಲಿ ಶತಕ ದಾಖಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಮೊದಲು ರಿಷಬ್ ಪಂತ್ 2018 ರಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿ ಮೊದಲಿಗರೆನಿಸಿದ್ದರು. ಈಗ ಇದು ಉರ್ವಿನ್ ಪಟೇಲ್ ಪಾಲಾಗಿದೆ.
ಇಂದೋರ್‌ನಲ್ಲಿ ನಡೆದ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ತ್ರಿಪುರಾ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಪರವಾಗಿ ಆಡಿದ ಉರ್ವಿನ್ ಪಟೇಲ್ ವೇಗದ ಶತಕ ಸಿಡಿಸಿದ್ದಾರೆ. ಟಾಸ್ ಗೆದ್ದ ಗುಜರಾತ್ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಆರಂಭಿಸಿದ ತ್ರಿಪುರಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಕಲೆಹಾಕಿತು.
ಈ ಗುರಿ ಬೆನ್ನತ್ತಿದ ಗುಜರಾತ್ ತಂಡವು ಆರಂಭದಿಂದಲ್ಲೆ ಅಬ್ಬರದ ಆಟವಾಡುವ ಮೂಲಕ ಕೇವಲ 10.2 ಓವರ್‌ಗಳಲ್ಲೆ ಜಯ ದಾಖಲಿಸಿತು. ಭರ್ಜರಿ ಬ್ಯಾಟಿಂಗ್ ಮಾಡಿದ ಉರ್ವಿನ್ ಪಟೇಲ್ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದರು. ಅಂತಿಮವಾಗಿ 35 ಎಸೆತಗಳಲ್ಲಿ 12 ಸಿಕ್ಸ್ ಹಾಗೂ 7 ಫೋರ್‌ಗಳೊಂದಿಗೆ 113 ರನ್ ಬಾರಿಸಿದರು. ಈ ಶತಕದ ಮೂಲಕ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರರಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.
ಆದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ವಿಶ್ವದಾಖಲೆ ಮುರಿಯಲು ಸಾಧ್ಯವಾಗಲಿಲ್ಲ. ಸಾಹಿಲ್ ಚೌಹಾನ್ ಎನ್ನುವವರು ಈ ಪಟ್ಟಿಯ ಮೊದಲ ಸ್ಥಾನದಲ್ಲಿದ್ದಾರೆ. ಇವರು 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ನಂತರದ ಸ್ಥಾನದಲ್ಲಿ ಉರ್ವಿನ್ ಪಟೇಲ್ ಇದ್ದಾರೆ.
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…