ಕ್ರೀಡೆ

ಯುಎಸ್​ಎ ಲೀಗ್ಸ್ ಕಪ್: ವಿಶ್ವ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ

ಯುಎಸ್​ಎಯ ಲೀಗ್ಸ್ ಕಪ್ ಫೈನಲ್ ಪಂದ್ಯದಲ್ಲಿ ಗೆದ್ದು ಲಿಯೋನೆಲ್ ಮೆಸ್ಸಿ ನೇತೃತ್ವದ ಇಂಟರ್ ಮಿಯಾಮಿ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ನ್ಯಾಶ್ವಿಲ್ಲೆ ಕ್ಲಬ್ ವಿರುದ್ಧ ನಡೆದ ಅಂತಿಮ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಪಂದ್ಯದ 23ನೇ ನಿಮಿಷದಲ್ಲಿ ಗೋಲು ಬಾರಿಸುವ ಮೂಲಕ ಮೆಸ್ಸಿ ಇಂಟರ್ ಮಿಯಾಮಿ ತಂಡಕ್ಕೆ ಯಶಸ್ಸು ತಂದುಕೊಟ್ಟರು.

ಆದರೆ ದ್ವಿತಿಯಾರ್ಧದ 57ನೇ ನಿಮಿಷದಲ್ಲಿ ನ್ಯಾಶ್ವಿಲ್ಲೆ ಫಾಫಾ ಪಿಕಾಲ್ಟ್ ಗೋಲು ದಾಖಲಿಸಿದರು. ಇದಾದ ಬಳಿಕ ಉಭಯ ತಂಡಗಳ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು. ಆದರೆ ಎರಡೂ ತಂಡಗಳು ಗೋಲುಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿರಲಿಲ್ಲ. ಪರಿಣಾಮ ಪಂದ್ಯವು 1-1 ಸಮಬಲದೊಂದಿಗೆ ಅಂತ್ಯವಾಯಿತು.

ಪಂದ್ಯ ಸಮಬಲಗೊಂಡಿದ್ದರಿಂದ ಫಲಿತಾಂಶ ನಿರ್ಧಾರಕ್ಕಾಗಿ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು.  5 ಅವಕಾಶಗಳ ಪೆನಾಲ್ಟಿ ಶೂಟೌಟ್​ನಲ್ಲಿ ಉಭಯ ತಂಡಗಳು 4-4 ಅಂತರದಿಂದ ಸಮಬಲ ಸಾಧಿಸಿದ್ದರು. ಹೀಗಾಗಿ 2ನೇ ಸುತ್ತಿನ ಅವಕಾಶ ನೀಡಲಾಯಿತು.

2ನೇ ಸುತ್ತಿನ ಪೆನಾಲ್ಟಿ ಶೂಟೌಟ್​ನ ಕೊನೆಯ ಅವಕಾಶದಲ್ಲಿ ನ್ಯಾಶ್ವಿಲ್ಲೆ ಗೋಲು ಕೀಪರ್ ಚೆಂಡನ್ನು ಬಲೆಯೊಳಗೆ ತಲುಪಿಸುವಲ್ಲಿ ಎಡವಿದರು. ಇದರೊಂದಿಗೆ ಇಂಟರ್ ಮಿಯಾಮಿ ತಂಡ 10-9 ಅಂತರದಿಂದ ಜಯ ಸಾಧಿಸಿತು. ಈ ಮೂಲಕ ಅಮೆರಿಕನ್ ಲೀಗ್​ನಲ್ಲೂ ಲಿಯೋನೆಲ್ ಮೆಸ್ಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡರು. ಅಲ್ಲದೆ ಟೂರ್ನಿಯ ಬೆಸ್ಟ್ ಪ್ಲೇಯರ್ ಹಾಗೂ ಅತೀ ಹೆಚ್ಚು ಗೋಲು ಬಾರಿಸಿದ ಪ್ರಶಸ್ತಿಯನ್ನು ಸಹ ಬಾಚಿಕೊಂಡರು.

ಮೆಸ್ಸಿ ವಿಶ್ವ ದಾಖಲೆ : ಈ ಗೆಲುವಿನೊಂದಿಗೆ ಫುಟ್​ಬಾಲ್ ಇತಿಹಾಸದಲ್ಲೇ ಅತ್ಯಧಿಕ ಟ್ರೋಫಿ ಗೆದ್ದ ವಿಶ್ವ ದಾಖಲೆ ಕೂಡ ಲಿಯೋನೆಲ್ ಮೆಸ್ಸಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಬ್ರೆಝಿಲ್​ಗೆ ಡ್ಯಾನಿ ಅಲ್ವೆಸ್ ಹೆಸರಿನಲ್ಲಿತ್ತು. ಅಲ್ವೆಸ್ ಒಟ್ಟು 43 ಟ್ರೋಫಿಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು.

ಇದೀಗ 44ನೇ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ಮೂಲಕ ಅರ್ಜೆಂಟೀನಾ ತಾರೆ ಲಿಯೋನೆಸ್ ಮೆಸ್ಸಿ ಫುಟ್​ಬಾಲ್ ಇತಿಹಾಸದಲ್ಲೇ ಅತೀ ಹೆಚ್ಚು ಟ್ರೋಫಿಗಳನ್ನು ಗೆದ್ದ ಆಟಗಾರ ಎನಿಸಿಕೊಂಡಿದ್ದಾರೆ.

7ನೇ ಸ್ಥಾನದಲ್ಲಿ ರೊನಾಲ್ಡೊ : ಫುಟ್​ಬಾಲ್ ಇತಿಹಾಸದಲ್ಲಿ ಅತ್ಯಧಿಕ ಟ್ರೋಫಿಗಳನ್ನು ಮುಡಿಗೇರಿಸಿಕೊಂಡ ಆಟಗಾರರಲ್ಲಿ ಪೋರ್ಚುಗಲ್​ನ ಖ್ಯಾತ ಕಾಲ್ಚೆಂಡು ಚತುರ ಕ್ರಿಸ್ಟಿಯಾನೊ ರೊನಾಲ್ಡೊ 7ನೇ ಸ್ಥಾನದಲ್ಲಿದ್ದಾರೆ. ರೊನಾಲ್ಡೊ ಒಟ್ಟು 35 ಟ್ರೋಫಿಗಳನ್ನು ಗೆದ್ದುಕೊಂಡಿದ್ದಾರೆ.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago