ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 8 ವಿಕೆಟ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಗುವಾಹಟಿಯ ಬಾರ್ಸಾಪರ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಜಸ್ಥಾನ್ ಬೌಲರ್‌ಗಳ ಮುಂದೆ ತತ್ತರಿಸಿತು. ಹೀಗಾಗಿ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 127 ರನ್ ಗಳಿಸಿ ಆಲೌಟ್ ಆಯಿತು. ಸುಲಭ ಸವಾಲನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ 12.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 128ರನ್ ಹೊಡೆದು ಗೆಲುವು ಸಾಧಿಸಿತು.
ಸೂರ್ಯವಂಶಿ ತಾನು ಎದುರಿಸಿದ ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಸಿಕ್ಸ್ ಸಿಡಿಸಿ ಅಬ್ಬರ ಆಟಕ್ಕೆ ಚಾಲನೆ ನೀಡಿದರು. ಸೂರ್ಯವಂಶಿ 15 ಎಸೆತಕ್ಕೆ ಅರ್ಧಶತಕ ಸಿಡಿಸಿ ಅಂತಿಮವಾಗಿ 52 ರನ್(17 ಎಸೆತ, 4 ಬೌಂಡರಿ, 5 ಸಿಕ್ಸ್) ಸಿಡಿಸಿ ಕ್ಯಾಚ್ ನೀಡಿ ಔಟಾದರು. ಸೂರ್ಯವಂಶಿಯ ಅಬ್ಬರದ ಆಟದಿಂದ ಮೊದಲ ವಿಕೆಟಿಗೆ 38 ಎಸೆತಗಳಲ್ಲಿ 75 ರನ್ ಬಂದಿತ್ತು. ಯಶಸ್ವಿ ಜೈಸ್ವಾಲ್ ಅವರು 38 ರನ್‌ಗಳೊಂದಿಗೆ ಅಜೇಯರಾಗಿ ಉಳಿದರು. ರಿಯಾನ್ ಪರಾಗ್ 14 ರನ್‌ಗಳು ಸೇರಿದಂತೆ ರಾಜಸ್ಥಾನ್ ತಂಡವು ಗುರಿಯನ್ನು ಸುಲಭವಾಗಿ ತಲುಪಿತು.
ಚೆನ್ನೈಗೆ ಆರಂಭದಲ್ಲೇ ಆಘಾತ
ಚೆನ್ನೈಗೆ ಆರಂಭದಲ್ಲೇ ಆರ್‌ಆರ್ ಬೌಲರ್‌ಗಳು ಶಾಕ್ ನೀಡಿದರು. ನಾಂಡ್ರೆ ಬರ್ಗರ್ ಸಂಜು ಸಾಮ್ಸನ್ ಅವರನ್ನು ನಾಯಕ ಋತುರಾಜ್ ಗಾಯಕ್ವಾಡ್ ಅವರನ್ನು ಜೋಫ್ರಾ ಆರ್ಚರ್ ಬೌಲ್ಡ್ ಮಾಡಿದರು. ನಂತರ ಸಂದೀಪ್ ಶರ್ಮಾ, ನಾಯಕ ರವೀಂದ್ರ ಜಡೇಜಾ ನಾವು ಕಡಿಮೆ ಇಲ್ಲ ಎನ್ನುವಂತೆ ಬೌಲಿಂಗ್ ಮಾಡಿದರು.
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…