ಕ್ರೀಡೆ

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಜಸ್ಥಾನ ರಾಯಲ್ಸ್‌ 8 ವಿಕೆಟ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಗುವಾಹಟಿಯ ಬಾರ್ಸಾಪರ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಜಸ್ಥಾನ್‌ ಬೌಲರ್‌ಗಳ ಮುಂದೆ ತತ್ತರಿಸಿತು. ಹೀಗಾಗಿ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 127 ರನ್ ಗಳಿಸಿ ಆಲೌಟ್‌ ಆಯಿತು. ಸುಲಭ ಸವಾಲನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ 12.1 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 128ರನ್‌ ಹೊಡೆದು ಗೆಲುವು ಸಾಧಿಸಿತು.

ಸೂರ್ಯವಂಶಿ ತಾನು ಎದುರಿಸಿದ ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಸಿಕ್ಸ್‌ ಸಿಡಿಸಿ ಅಬ್ಬರ ಆಟಕ್ಕೆ ಚಾಲನೆ ನೀಡಿದರು. ಸೂರ್ಯವಂಶಿ 15 ಎಸೆತಕ್ಕೆ ಅರ್ಧಶತಕ ಸಿಡಿಸಿ ಅಂತಿಮವಾಗಿ 52 ರನ್‌(17 ಎಸೆತ, 4 ಬೌಂಡರಿ, 5 ಸಿಕ್ಸ್‌) ಸಿಡಿಸಿ ಕ್ಯಾಚ್‌ ನೀಡಿ ಔಟಾದರು. ಸೂರ್ಯವಂಶಿಯ ಅಬ್ಬರದ ಆಟದಿಂದ ಮೊದಲ ವಿಕೆಟಿಗೆ 38 ಎಸೆತಗಳಲ್ಲಿ 75 ರನ್‌ ಬಂದಿತ್ತು. ಯಶಸ್ವಿ ಜೈಸ್ವಾಲ್ ಅವರು 38 ರನ್‌ಗಳೊಂದಿಗೆ ಅಜೇಯರಾಗಿ ಉಳಿದರು. ರಿಯಾನ್ ಪರಾಗ್ 14 ರನ್‌ಗಳು ಸೇರಿದಂತೆ ರಾಜಸ್ಥಾನ್ ತಂಡವು ಗುರಿಯನ್ನು ಸುಲಭವಾಗಿ ತಲುಪಿತು.

ಚೆನ್ನೈಗೆ ಆರಂಭದಲ್ಲೇ ಆಘಾತ
ಚೆನ್ನೈಗೆ ಆರಂಭದಲ್ಲೇ ಆರ್‌ಆರ್‌ ಬೌಲರ್‌ಗಳು ಶಾಕ್‌ ನೀಡಿದರು. ನಾಂಡ್ರೆ ಬರ್ಗರ್ ಸಂಜು ಸಾಮ್ಸನ್‌ ಅವರನ್ನು ನಾಯಕ ಋತುರಾಜ್‌ ಗಾಯಕ್ವಾಡ್‌ ಅವರನ್ನು ಜೋಫ್ರಾ ಆರ್ಚರ್‌ ಬೌಲ್ಡ್‌ ಮಾಡಿದರು. ನಂತರ ಸಂದೀಪ್‌ ಶರ್ಮಾ, ನಾಯಕ ರವೀಂದ್ರ ಜಡೇಜಾ ನಾವು ಕಡಿಮೆ ಇಲ್ಲ ಎನ್ನುವಂತೆ ಬೌಲಿಂಗ್‌ ಮಾಡಿದರು.

ಆಂದೋಲನ ಡೆಸ್ಕ್

Recent Posts

ಕೆಚ್ಚೆದೆಯ ನೇಹಾ ಮತ್ತು ವಾತ್ಸಲ್ಯದ ಅಮ್ಮ

ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…

1 min ago

ಪೆಟ್ರೋಲ್ ಬಂಕ್‌ನಲ್ಲಿ ನಿರ್ಮಾಣವಾದ ಮಿನಿ ಕೆರೆ!

ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…

14 mins ago

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

21 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

26 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

47 mins ago

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ  ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…

55 mins ago