ಕ್ರೀಡೆ

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ವರುಣ್‌ ಆರನ್‌…

ಹೊಸದಿಲ್ಲಿ: ಒಂದು ಕಾಲದಲ್ಲಿ ಭಾರತ ತಂಡದ ವೇಗದ ಬೌಲರ್‌ ಎಂದು ಗುರುತಿಸಿಕೊಂಡಿದ್ದ 35 ವರ್ಷದ ವರುಣ್‌ ಆರನ್‌ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಿಜಯ್‌ ಹಜಾರೆ ಟೂರ್ನಿಯಲ್ಲಿ ಜಾರ್ಖಂಡ್‌ ತಂಡ ಪ್ರತಿನಿಧಿಸಿದ್ದ ವರುಣ್‌ ಟೂರ್ನಿಯಿಂದ ತಂಡ ಹೊರಬಿದ್ದ ನಂತರ ವಿದಾಯ ಘೋಷಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಅವರು, 20 ವರ್ಷಗಳಿಂದ ನನ್ನ ಜೀವನ, ಉಸಿರು ಕ್ರಿಕೆಟ್‌ ಆಗಿತ್ತು. ಗಾಯದ ಸಮಸ್ಯೆಗಳು ನನ್ನನ್ನು ಭಾರತ ತಂಡದಿಂದ ದೂರ ಉಳಿಯುವಂತೆ ಮಾಡಿದೆ. ಆದ ಕಾರಣ ನಾನು ಕ್ರಿಕೆಟ್‌ನ ಎಲ್ಲ ಮಾದರಿಗೂ ನಿವೃತ್ತಿ ಷೋಷಿಸುತ್ತಿದ್ದೇನೆ ಎಂದು ಬರೆದು ಕೊಂಡಿದ್ದಾರೆ. 2015ರ ನಂತರ ಅವರು ಭಾರತ ತಂಡದಲ್ಲಿ ಆಟ ಆಡಿರಲಿಲ್ಲ.

21ನೇ ವಯಸ್ಸಿನಲ್ಲಿ ವೇಗದ ಬೌಲರ್‌ ಆಗಿ 2010-11ರಲ್ಲಿ ವಿಜಯ್‌ ಹಜಾರೆ ಟ್ರೋಫಿಯಲ್ಲಿ ದೇಶದ ಗಮನ ಸೆಳೆದಿದ್ದರು. ಗುಜರಾತ್‌ ವಿರುದ್ಧ ಫೈನಲ್‌ನಲ್ಲಿ ಪ್ರತಿ ಗಂಟೆಗೆ 153 ಕಿ.ಮೀ ವೇಗದಲ್ಲಿ ಬೌಲಿಂಗ್‌ ಮಾಡಿದ್ದರು.

2011 ರಲ್ಲಿ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ವರುಣ್‌ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ್ದರು. ಅದೇ ವರ್ಷ ವೆಸ್ಟ್‌ ಇಂಡೀಶ್ ವಿರುದ್ಧದ ಟೆಸ್ಟ್‌ಗೂ ಪಾದರ್ಪಣೆ ಮಾಡಿದ್ದರು.

ಅಂತರಾಷ್ಟ್ರೀಯ ಮಟ್ಟದಲ್ಲಿ 9 ಏಕದಿನ ಮತ್ತು 9 ಟೆಸ್ಟ್‌ ಪಂದ್ಯವಾಡಿರುವ ವರುಣ್‌ 29 ವಿಕೆಟ್‌ ಪಡೆದಿದ್ದಾರೆ.

ಲಿಸ್ಟ್‌ ಎ ನಲ್ಲಿ 88 ಪಂದ್ಯಗಳು ಆಡಿರುವ ವರುಣ್‌ 24.67ರ ಸರಾಸರಿಯಲ್ಲಿ 141 ವಿಕೆಟ್‌ಗಳನ್ನು ಪಡೆದಿದ್ದಾರೆ. 2011 ರಿಂದ 2022 ರ ಅವಧಿಯಲ್ಲಿ ಆರ್‌ಸಿಬಿ ಸೇರಿ ಐದು ಐಪಿಎಲ್‌ ತಂಡಗಳನ್ನು ಪ್ರತಿನಿಧಿಸಿ 52 ಪಂದ್ಯಗಳಿಂದ 44 ವಿಕೆಟ್‌ ಗಳಿಸಿದ್ದಾರೆ. 2022 ರಲ್ಲಿ ಗುಜರಾತ್‌ ಟೈಟಾನ್ಸ್‌ ಐಪಿಎಲ್‌ ಟೂರ್ನಿ ಗೆದ್ದಾಗ ಆ ತಂಡವನ್ನು ಪ್ರತಿನಿಧಿಸಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago