Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಆರ್‌ಸಿಬಿ ಮಹಿಳಾ ತಂಡಕ್ಕೆ ಜಯ : ಸಿದ್ದರಾಮಯ್ಯ ಸೇರಿ ದಿಗ್ಗಜರಿಂದ ಅಭಿನಂದನೆ !

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ.

ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್‌ ಕೊಹ್ಲಿ, ಕ್ರಿಸ್‌ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.

ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್‌ ಕೊಹ್ಲಿ, ಕ್ರಿಸ್‌ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.

ವಿಡಿಯೋ ಕಾಲ್ ಮಾಡಿದ ಕೊಹ್ಲಿ : ಆರ್‌ಸಿಬಿ ಮಹಿಳಾ ತಂಡ ಚೊಚ್ಚಲ ವುಮೆನ್ಸ್ ಪ್ರೀಮಿಯರ್‌ ಲೀಗ್‌ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಪುರುಷರ ತಂಡದ ಹಿರಿಯ ಬ್ಯಾಟ್ಸ್‌ಮನ್‌ ವಿರಾಟ್‌ ವಿಡಿಯೋ ಕರೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್‌ ಕೊಹ್ಲಿ ಮಹಿಳಾ ತಂಡದ ಜೊತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಚಹಲ್ : ಬೆಂಗಳೂರು ತಂಡದ ಮಾಜಿ ಸ್ಪಿನ್ನರ್ ಯುಜ್ವೇಂದ್ರ ಚಾಹಲ್‌ “ಆನಂದ..ಪರಮಾನಂದ…ಪರಮಾನಂದ.. ನಮ್ಮ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು,” ಎಂದುಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ಧರಾಮಯ್ಯ : ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ…..ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ

Tags: