ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಮಿಜೊರಾಂ ತಂಡವನ್ನು ಸೋಲಿಸುವ ಮೂಲಕ ಕ್ವಾರ್ಟರ್ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಲೀಗ್‌ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದ ಕರ್ನಾಟಕ 6 ಪಂದ್ಯಗಳಲ್ಲಿ ಗೆದ್ದಿದ್ದು, ಒಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ 24 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಲೀಗ್ ಹಂತದಲ್ಲಿ ಕಣಕ್ಕಿಳಿದ ಎಲ್ಲಾ 7 ಪಂದ್ಯಗಳನ್ನು ಗೆದ್ದ ಹರಿಯಾಣ ಅಂಕಪಟ್ಟಿಯಲ್ಲಿ 28 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನದಲ್ಲಿದೆ.
ನಿನ್ನೆ ( ಡಿಸೆಂಬರ್ 5 ) ಅಹ್ಮದಾಬಾದ್‌ನ ಗುಜರಾತ್ ಕಾಲೇಜು ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಿಜೊರಾಂ 37.2 ಓವರ್‌ಗಳಲ್ಲಿ 124 ರನ್ ಕಲೆಹಾಕಿ ಆಲ್‌ಔಟ್ ಆಗಿ ಕರ್ನಾಟಕ ತಂಡಕ್ಕೆ ಗೆಲ್ಲಲು 125 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಕರ್ನಾಟಕ 17.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.
ಕರ್ನಾಟಕದ ಪರ ಬೌಲಿಂಗ್‌ನಲ್ಲಿ ವಾಸುಕಿ ಕೌಶಿಕ್ 4 ವಿಕೆಟ್ ಪಡೆದು ಮಿಂಚಿದರು, ಕೃಷ್ಣಪ್ಪ ಗೌತಮ್ 3 ವಿಕೆಟ್, ಮನೋಜ್ ಭಂಡಗೆ 2 ವಿಕೆಟ್ ಹಾಗೂ ಮುರಳೀಧರ ವೆಂಕಟೇಶ್ ಒಂದು ವಿಕೆಟ್ ಪಡೆದರು. ಬ್ಯಾಟಿಂಗ್‌ನಲ್ಲಿ ನಾಯಕ ಮಯಾಂಕ್ ಅಗರ್ವಾಲ್ ಅಜೇಯ 48 ಹಾಗೂ ಮನೀಶ್ ಪಾಂಡೆ ಅಜೇಯ 38 ರನ್ ಕಲೆಹಾಕಿದರು.
ಕ್ವಾರ್ಟರ್ ಫೈನಲ್ ಸೆಣಸಾಟ ಹೀಗಿರಲಿದೆ:
ಕರ್ನಾಟಕ ತಂಡ ಕ್ವಾರ್ಟರ್ ಫೈನಲ್‌ನಲ್ಲಿ ವಿದರ್ಭ ತಂಡದ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯ ರಾಜ್‌ಕೋಟ್‌ನ ಸನೋಸರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ಗೆ ಪ್ರವೇಶಿಸಲಿದೆ. ವಿದರ್ಧ ತಂಡ ಲೀಗ್‌ನಲ್ಲಿ ಕಣಕ್ಕಿಳಿದಿದ್ದ ತನ್ನ ಒಟ್ಟು 7 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿತ್ತು.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…