ಕ್ರೀಡೆ

Vijay Hazare Trophy 2023: ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಕರ್ನಾಟಕ

ಪ್ರಸ್ತುತ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಮಿಜೊರಾಂ ತಂಡವನ್ನು ಸೋಲಿಸುವ ಮೂಲಕ ಕ್ವಾರ್ಟರ್‌ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಲೀಗ್‌ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದ ಕರ್ನಾಟಕ 6 ಪಂದ್ಯಗಳಲ್ಲಿ ಗೆದ್ದಿದ್ದು, ಒಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ 24 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಲೀಗ್ ಹಂತದಲ್ಲಿ ಕಣಕ್ಕಿಳಿದ ಎಲ್ಲಾ 7 ಪಂದ್ಯಗಳನ್ನು ಗೆದ್ದ ಹರಿಯಾಣ ಅಂಕಪಟ್ಟಿಯಲ್ಲಿ 28 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನದಲ್ಲಿದೆ.

ನಿನ್ನೆ ( ಡಿಸೆಂಬರ್‌ 5 ) ಅಹ್ಮದಾಬಾದ್‌ನ ಗುಜರಾತ್‌ ಕಾಲೇಜು ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಿಜೊರಾಂ 37.2 ಓವರ್‌ಗಳಲ್ಲಿ 124 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಕರ್ನಾಟಕ ತಂಡಕ್ಕೆ ಗೆಲ್ಲಲು 125 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಕರ್ನಾಟಕ 17.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 126 ರನ್‌ ಗಳಿಸಿ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.

ಕರ್ನಾಟಕದ ಪರ ಬೌಲಿಂಗ್‌ನಲ್ಲಿ ವಾಸುಕಿ ಕೌಶಿಕ್‌ 4 ವಿಕೆಟ್‌ ಪಡೆದು ಮಿಂಚಿದರು, ಕೃಷ್ಣಪ್ಪ ಗೌತಮ್‌ 3 ವಿಕೆಟ್‌, ಮನೋಜ್‌ ಭಂಡಗೆ 2 ವಿಕೆಟ್‌ ಹಾಗೂ ಮುರಳೀಧರ ವೆಂಕಟೇಶ್‌ ಒಂದು ವಿಕೆಟ್‌ ಪಡೆದರು. ಬ್ಯಾಟಿಂಗ್‌ನಲ್ಲಿ ನಾಯಕ ಮಯಾಂಕ್‌ ಅಗರ್ವಾಲ್‌ ಅಜೇಯ 48 ಹಾಗೂ ಮನೀಶ್‌ ಪಾಂಡೆ ಅಜೇಯ 38 ರನ್‌ ಕಲೆಹಾಕಿದರು.

ಕ್ವಾರ್ಟರ್‌ ಫೈನಲ್‌ ಸೆಣಸಾಟ ಹೀಗಿರಲಿದೆ:
ಕರ್ನಾಟಕ ತಂಡ ಕ್ವಾರ್ಟರ್‌ ಫೈನಲ್‌ನಲ್ಲಿ ವಿದರ್ಭ ತಂಡದ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯ ರಾಜ್‌ಕೋಟ್‌ನ ಸನೋಸರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ಗೆ ಪ್ರವೇಶಿಸಲಿದೆ. ವಿದರ್ಧ ತಂಡ ಲೀಗ್‌ನಲ್ಲಿ ಕಣಕ್ಕಿಳಿದಿದ್ದ ತನ್ನ ಒಟ್ಟು 7 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿತ್ತು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago