ಕ್ರೀಡೆ

ವಿಜಯ್‌ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಸತತ 4ನೇ ಜಯ

ಅಹ್ಮದಾಬಾದ್‌ : ಕರ್ನಾಟಕದ ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ದಾಳಿಯ ಮುಂದೆ ನಲುಗಿದ ಬಿಹಾರ ತಂಡ ವಿಜಯ್‌ ಹಜಾರೆ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಕರ್ನಾಟಕ ಮುಂದೆ ಮಂಡಿಯೂರಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಎ ಗ್ರೌಂಡ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಿಹಾರ ನೀಡಿದ 217 ರನ್‌ ಗುರಿಯನ್ನು ಸರಾಗವಾಗಿ ಬೆನ್ನಟ್ಟಿದ ಕರ್ನಾಟಕ ತಂಡ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ ʼಗ್ರೂಪ್‌ ಸಿʼ ಯಲ್ಲಿ ಅಗ್ರಸ್ಥಾನಕ್ಕೇರಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಬಿಹಾರ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ ಕೇವಲ 217 ರನ್‌ ಗಳಿಸಲಷ್ಟೆ ಶಕ್ತರಾದರು. ಆರಂಭಿಕ ಆಘಾತ ಅನುಭವಿಸಿದ ಬಿಹಾರ್‌ ಅಲೋಕ್‌ ಕುಮಾರ್‌ (7) ಬೇಗನೆ ವಿಕೆಟ್‌ ಕಳೆದುಕೊಂಡರು. ಶರ್ಮನ್‌ ನಿಗ್ರೋಧ್‌ 21, ಬಬುಲ್‌ ಕುಮಾರ್‌ 17, ಬಿಪಿನ್‌ ಸೌರಭ್‌ 8 ರನ್‌ ಗಳಿಸಿದರು.

ತಂಡ ಮೇಲಿಂದ ಮೇಲೆ ವಿಕೆಟ್‌ ಕಳೆದುಕೊಳ್ಳುತ್ತಿದ್ದರೂ ಸಹಾ ಏಕಾಂಗಿ ಹೋರಾಟ ನಡೆಸಿದ ಸಕಿಬುಲ್‌ ಗಣಿ ಅವರು ಆಕರ್ಷಕ ಶತಕ ದಾಖಲಿಸಿದರು. 100 ಎಸೆತಗಳನ್ನು ಎದುರಿಸಿದ ಅವರು 9 ಬೌಂಡರಿ ಮತ್ತು 5 ಸಿಕ್ಸರ್‌ ಸಹಿತ 113 ರನ್‌ ಗಳಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.

ಕರ್ನಾಟಕ ಪರ ಸುಚಿತ್‌ 3, ಕಾವೇರಪ್ಪ, ವೈಶಾಕ್‌ ವಿಜಯ್‌ಕುಮಾರ್‌ ಮತ್ತು ಆರ್‌ ಸಮರ್ಥ್‌ ತಲಾ 1 ವಿಕೆಟ್‌ ಪಡೆದರು.

ಬಿಹಾರ ನೀಡಿದ 217 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಕರ್ನಾಟಕ ಕೇವಲ 33.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 218 ಬಾರಿಸುವ ಮೂಲಕ ಸಿ ಗ್ರೂಪ್‌ನಲ್ಲಿ ಸತತ ನಾಲ್ಕನೇ ಗೆಲುವು ದಾಖಲಿಸಿ ಟೇಬಲ್‌ ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ.

ಆರಂಭದಲ್ಲಿ ಆರ್‌.ಸಮರ್ಥ್‌(6) ಬೇಗನೆ ಔಟಾದರು. ನಾಯಕ ಮಯಾಕ್‌ ಅಗರ್ವಾಲ್‌ (28) ರನ್‌ ತಂಡಕ್ಕೆ ಕಾಣಿಕೆ ನೀಡಿದರು. ನಿಖಿನ್‌ ಜೋಸ್‌ (69) ಮತ್ತು ದೇವ್‌ದತ್‌ ಪಡಿಕ್ಕಲ್‌ (93) ತಂಡವನ್ನು ಗೆಲುವಿನ ಸನಿಹ ಕೊಂಡ್ಯೊಯ್ದರು. ಮನೀಶ್‌ ಪಾಂಡೆ 17 ರನ್‌ ಗಳಿಸಿ ಅಜೇಯರಾಗಿ ಉಳಿದು ತಂಡಕ್ಕೆ ಜಯ ತಂದುಕೊಟ್ಟರು. ಪಡಿಕ್ಕಲ್‌ ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 5 ಸಿಕ್ಸರ್‌ಗಳಿದ್ದವು.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago