ಕ್ರೀಡೆ

ಮಯಂಕ್‌ ಪಡೆಗೆ ವಿಜಯ್‌ ಹಜಾರೆ ಟ್ರೋಫಿ

ವಡೋದರಾ: ಇಲ್ಲಿನ ಕೊಟಂಬಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ವಿಜಯ್‌ ಹಜಾರೆ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡ ವಿದರ್ಭ ತಂಡದ ವಿರುದ್ಧ 36 ರನ್‌ಗಳ ಗೆಲುವನ್ನು ದಾಖಲಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ವಿದರ್ಭ ಕರ್ನಾಟಕ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 348 ರನ್‌ ಕಲೆಹಾಕಿ ವಿದರ್ಭ ತಂಡಕ್ಕೆ 349 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ವಿದರ್ಭ 48.2 ಓವರ್‌ಗಳಲ್ಲಿ 312 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಕರ್ನಾಟಕ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ‌ ಮಯಾಂಕ್‌ ಅಗರ್ವಾಲ್‌ 32 ಹಾಗೂ ದೇವದತ್‌ ಪಡಿಕ್ಕಲ್‌ 8 ರನ್‌ ಬಾರಿಸಿದರೆ, ಅನೀಶ್‌ ಕೆವಿ 21 ರನ್‌ ಸ್ಮರಣ್‌ ರವಿಚಂದ್ರನ್‌ 101 ಬಾರಿಸಿದರು. ಇನ್ನುಳಿದಂತೆ ಕೃಷ್ಣನ್‌ ಶ್ರೀಜಿತ್‌ 78 ರನ್‌ ಬಾರಿಸಿ ಆಸರೆಯಾದರೆ, ಅಭಿನವ್‌ ಮನೋಹರ್‌ 42 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 79 ಸಿಡಿಸಿದರು, ಹಾರ್ದಿಕ್‌ ರಾಜ್‌ ಅಜೇಯ 12 ಹಾಗೂ ಶ್ರೇಯಸ್‌ ಗೋಪಾಲ್‌ ಅಜೇಯ 3 ರನ್‌ ಗಳಿಸಿದರು.

ವಿದರ್ಭ ಪರ ದರ್ಶನ್‌ ನಾಲ್ಕಂಡೆ ಹಾಗೂ ನಚಿಕೇತ್‌ ತಲಾ 2 ವಿಕೆಟ್‌ ಪಡೆದರೆ, ಯಶ್‌ ಠಾಕೂರ್‌ ಹಾಗೂ ಯಶ್ ಖಡಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಿದರ್ಭ ಇನ್ನಿಂಗ್ಸ್:‌ ಧೃವ್‌ ಶೋರೆ 110, ಯಶ್‌ ರಾಥೋಡ್‌ 22, ಕರುಣ್‌ ನಾಯರ್‌ 27, ಯಶ್‌ ಖಡಮ್‌ 15, ಜಿತೇಶ್‌ ಶರ್ಮಾ 34, ಶುಭಮ್‌ ದುಬೆ 8, ಅಪೂರ್ವ್‌ ವಾಂಖಡೆ 12, ಹರ್ಷ್‌ ದುಬೆ 63, ನಚಿಕೇತ್‌ 5, ದರ್ಶನ್‌ ನಾಲ್ಕಂಡೆ 11 ರನ್ ಹಾಗೂ‌ ಯಾವುದೇ ರನ್‌ ಗಳಿಸದ ಯಶ್‌ ಠಾಕೂರ್‌ ಅಜೇಯರಾಗಿ ಉಳಿದರು.

ಕರ್ನಾಟಕದ ಪರ ವಾಸುಕಿ ಕೌಶಿಕ್‌, ಪ್ರಸಿದ್ಧ್‌ ಕೃಷ್ಣ ಹಾಗೂ ಅಭಿಲಾಷ್‌ ಶೆಟ್ಟಿ ತಲಾ 3 ವಿಕೆಟ್‌ ಪಡೆದರೆ, ಹಾರ್ದಿಕ್‌ ರಾಜ್‌ 1 ವಿಕೆಟ್‌ ಪಡೆದರು.

ಪಂದ್ಯದಲ್ಲಿ ಅಬ್ಬರದ ಶತಕ ಸಿಡಿಸಿದ ಸಮರ್ಥ್‌ ರವಿಚಂದ್ರನ್‌ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಟೂರ್ನಿಯಲ್ಲಿ ಅತ್ಯುತ್ತಮ ಆಟವನ್ನಾಡಿದ ಕರುಣ್‌ ನಾಯರ್‌ ಸರಣಿಶ್ರೇಷ್ಠ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago