ಗುಜರಾತ್ : ವಿಜಯ ಹಜಾರೆ ಟೂರ್ನಿಯಲ್ಲಿ ಸಿ ಗ್ರೂಪ್‌ನಲ್ಲಿ ಆಡುತ್ತಿರುವ ಕರ್ನಾಟಕ ತಂಡ ಅದೇ ಗ್ರೂಪ್‌ನ ಹರ್ಯಾಣ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಆ ಮೂಲಕ ಈ ಟೂರ್ನಿಯಲ್ಲಿನ ತನ್ನ ಅಜೇಯ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. ಇತ್ತ ತಾನಾಡಿದ ಎಲ್ಲಾ ಪಂದ್ಯಗಳಲ್ಲಿ ಜಯ ದಾಖಲಿಸಿರುವ ಹರ್ಯಾಣ ಗ್ರೂಪ್‌ನಲ್ಲಿ ಅಗ್ರಸ್ಥಾನಕ್ಕೇರಿದೆ.
ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಜಯ ಹಜಾರೆ ಟೂರ್ನಿಯ ಗ್ರೂಪ್ ಸಿ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಹರ್ಯಾಣ ತಂಡ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡಕ್ಕೆ ನಿರೀಕ್ಷಿತ ಆರಂಭ ದೊರಕಿರಲಿಲ್ಲ. ಆರಂಭಿಕ ಆಟಗಾರ ಆಟಗಾರ ನಾಯಕ ಮಯಾಂಕ್ ಅಗರ್ವಾಲ್ (0) ಶೂನ್ಯಕ್ಕೆ ಔಟಾದರೆ, ರವಿಕುಮಾರ್ ಸಮರ್ಥ್ 1 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಕ್ರೀಸ್‌ಗೆ ಬಂದ ಬಿ.ಆರ್ ಶರತ್ (15), ನಿಕಿಕ್ ಜೋಸ್ (9) ಹಾಗೂ ಮನೀಷ್ ಪಾಂಡೆ (24) ಯಾರೊಬ್ಬರಿಂದಲೂ ಭದ್ರ ಇನ್ನಿಂಗ್ಸ್ ದೊರೆಯಲಿಲ್ಲ. ಬಂದ ದಾರಿಯಲ್ಲಿಯೇ ಬೇಗನೆ ನಿರ್ಗಮಿಸಿದರು. ಇನ್ನು ಅಭಿನವ್ ಮನೋಹರ್ 3 ರನ್ಗಳಿಸಿದರೆ, ಮನೋಜ್ ಭಂಡಾಗೆ 8 ರನ್ಗಳಿಸಿ ವಿಕೆಟ್ ಕೈಚೆಲ್ಲಿದರು.
ಬಳಿಕ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಜಯಕುಮಾರ್ ವೈಶಾಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ತಾವೆದುರಿಸಿದ 61 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 54 ರನ್ಗಳ ಚಚ್ಚಿದರು. ಈ ಅರ್ಧಶತಕದ ನೆರವಿನಿಂದ ಕರ್ನಾಟಕ ತಂಡವು 43.5 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 143 ರನ್ಗಳಿಸಿ ಆಲೌಟ್ ಆಯಿತು.
ಹರ್ಯಾಣ ಪರ ಸುಮಿತ್ ಕುಮಾರ್ 3, ಯುಜ್ವೇಂದ್ರ ಚಹಾಲ್ ಹಾಗೂ ನಿಶಾಂತ್ ಸಿಂಧು ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.
ಇತ್ತಾ ಕರ್ನಾಟಕ ನೀಡಿದ 144 ರನ್ಗಳ ಸುಲಭ ಗುರಿ ಬೆನ್ನತ್ತಿದ ಹರ್ಯಾಣ ತಂಡಕ್ಕೂ ಕೂಡ ಉತ್ತಮ ಆರಂಭ ಸಿಗಲಿಲ್ಲ. ಕೇವಲ 35 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ನಿಶಾಂತ್ ಸಿಂಧು (43) ಹಾಗೂ ರೋಹಿತ್ ಪ್ರಮೋದ್ ಶರ್ಮಾ (63) ತಂಡಕ್ಕೆ ಆಸರೆಯಾದರು.
31.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಹರ್ಯಾಣ ತಂಡವು ಗೆಲುವಿನ ದಡ ಸೇರಿತು. ಈ ಮೂಲಕ ಹರ್ಯಾಣ ತಂಡವು 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಕರ್ನಾಟಕ ಪರ ವಾಸುಕಿ ಕೌಶಿಕ್ 2, ಜೆ ಸುಜಿತ್ 2 ಮತ್ತು ವೈಶಾಖ್ 1 ವಿಕೆಟ್ ಪಡೆದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…