ಕ್ರೀಡೆ

ವಿನೇಶ್‌ ಫೋಗಟ್‌ ಅನರ್ಹ: ಐಒಎ ಅಧ್ಯಕ್ಷೆ ಪಿಟಿ ಉಷಾ ಮೊದಲ ಪ್ರತಿಕ್ರಿಯೆ

ಪ್ಯಾರಿಸ್: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಕೇವಲ 100ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನದ ಪದಕದ ನಿರೀಕ್ಷೆ ಕಮರಿದೆ.

ಈ ನಡುವೆ ನಿರ್ಜಲೀಕರಣದಿಂದಾಗಿ ಬಳಲುತ್ತಿರುವ ವಿನೇಶ್‌ ಫೋಗಟ್‌ ಅವರನ್ನು ಕ್ಲಿನಿಕ್‌ಗೆ ದಾಖಲಿಸಲಾಗಿದೆ. ಇದೀಗ ವಿನೇಶ್‌ರನ್ನು ಭೇಟಿಯಾಗಿದ್ದ ಭಾರತೀಯ ಒಲಿಂಪಿಕ್ಸ್‌ ಅಧ್ಯಕ್ಷೆ ಪಿಟಿ ಉಷಾ ಅನರ್ಹದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿನೇಶ್‌ ಫೋಗಟ್‌ ಅವರ ಅನರ್ಹತೆ ಆಘಾತಕಾರಿಯಾಗಿದೆ. ವಿನೇಶ್‌ ಅವರಿಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ, ಭಾರತ ಸರ್ಕಾರ ಹಾಗೂ ಇಡೀ ದೇಶದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇವೆ. ಜೊತೆಗೆ ವಿನೇಶ್‌ಗೆ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇನ್ನೂ ವಿನೇಶ್‌ ಅವರ ಅನರ್ಹತೆ ಬಗ್ಗೆ ಮಾತನಾಡಿದ ಅವರು, ಅನರ್ಹತೆಯ ವಿರುದ್ಧ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ ನಿರಂತರವಾಗಿ ಧ್ವನಿ ಎತ್ತುತ್ತಿದೆ. ಡಬ್ಲ್ಯುಎಫ್‌ಐ ಕೂಡ ಒಲಿಂಪಿಕ್ಸ್‌ ಸಮಿತಿಗೆ ಪತ್ರ ಬರೆದು ವಿನೇಶ್‌ ಅವರ ಅನರ್ಹತೆ ಬಗ್ಗೆ ವಿರೋಧ ವ್ಯಕಪಡಿಸಿದೆ ಎಂದಿದ್ದಾರೆ.

ವಿನೇಶ್‌ ಅವರಿಗೆ ವ್ಯದ್ಯಕೀಯ ತಪಾಸಣೆ ನಡೆಸಲಾಗಿದ್ದು, ಸದ್ಯ ಆಕೆ ಆರೋಗ್ಯವಾಗಿದ್ದಾರೆ. ವಿನೇಶ್‌ ದೈಹಿಕವಾಗಿ ಚೆನ್ನಾಗಿದ್ದಾರೆ ಆದರೆ ಮಾನಸಿಕವಾಗಿ ಅವರು ತುಂಬಾ ಕುಗ್ಗಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ತೂಕ ಹೆಚ್ಚಳದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಪರ್ದಿವಾಲಾ, ಕೆಲವೊಮ್ಮೆ ನಿರಂತರ ಪಂದ್ಯಗಳಿಂದ ಹೆಚ್ಚು ನೀರು ಕುಡಿಯಬೇಕಾಗುತ್ತದೆ. ಅಂತಹ ಪರಿಸ್ಥಿರಿಯಲ್ಲಿ ತೂಕ ಹೆಚ್ಚಾಗುತ್ತದೆ. ರಾತ್ರಿ ವಿನೇಶ್‌ನ ತೂಕ ಹೆಚ್ಚಾದಾಗ ಕಡಿಮೆ ಮಾಡಲು ವೈದ್ಯಕೀಯ ತಂಡ ಅನೇಕ ಪ್ರಯತ್ನ ಮಾಡಿತು, ಅವರ ಕೂದಲು ಹಾಗೂ ಉಗುರುಗಳನ್ನು ಕತ್ತರಿಸಲಾಯಿತು. ಆದರೆ ಬೆಳಿಗ್ಗೆ 7 ಗಂಟೆಗೆ ಅವರನ್ನು ತೂಕ ಮಾಡಿದಾಗ, ಅವರು ನಿಗದಿಗಿಂದ 100 ಗ್ರಾಂ ಹೆಚ್ಚು ತೂಕ ಇರುವುದು ಕಂಡುಬಂತು ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago