ನವದೆಹಲಿ: ಒಲಿಂಪಿಕ್‌ನಲ್ಲಿ ಭಾರತಕ್ಕೆ ಚಿನ್ನದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿದ್ದಾರೆ. ಇದು ದೇಶದ್ಯಾಂತ ಚರ್ಚೆಯಾಗುತ್ತಿದ್ದು, ವಿನೇಸ್ ಫೋಗಟ್ ಅನರ್ಹರಾಗಿದ್ದರೂ ಕೋಟ್ಯಂತರ ಭಾರತೀಯರ ಮನದಲ್ಲಿ ಈಗಾಗಲೇ ಚಿನ್ನ ಗೆದ್ದಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಡೆಯುತ್ತಿದೆ.
ವಿನೇಸ್ ಅವರನ್ನು ಅನರ್ಹಗೊಳಿಸಿರುವುದಕ್ಕೆ ಪ್ರಬಲ ಪ್ರತಿಭಟನೆ ಸಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಒಲಿಂಪಿಕ್ ಸಂಸ್ಥೆಗೆ ಒತ್ತಾಯಿಸಿದ್ದಾರೆ. ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಅವರೊಂದಿಗೆ ಮಾತನಾಡಿರುವ ಮೋದಿ, ಎಲ್ಲಾ ರೀತಿಯಲ್ಲಿ ಸಹಾಯ ಮಾಡಲು ಸಂಪೂರ್ಣ ಶ್ರೇಣಿಯ ಆಯ್ಕೆಗಳನ್ನು ತೆಗದುಕೊಳ್ಳಲು ಹೇಳಿದ್ದಾರೆ.
ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ನಿನ್ನೆ ಮೂರು ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿದ್ದರು. ಇಂದು ಅಮೆರಿಕದ ಹಿಲ್ಡೆಬ್ರಾಂಡ್ ಸಾರಾ ಆನ್ ರೊಂದಿಗೆ ಅಂತಿಮ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಮುನ್ನ ದೇಹತೂಕ ಹೆಚ್ಚಾದ ಕಾರಣಕ್ಕೆ ಅನರ್ಹಗೊಂಡಿದ್ದಾರೆ. ಇದನ್ನು ಬಲವಾಗಿ ವಿರೋಧಿಸುವಂತೆ ಪ್ರಧಾನಮಂತ್ರಿ ಪಿ.ಟಿ.ಉಷಾ ಅವರಿಗೆ ಸೂಚಿಸಿದ್ದಾರೆ.
ವಿಶ್ವ ಕುಸ್ತಿ ಸಂಸ್ಥೆ ನಿರ್ಧಾರಕ್ಕೆ ತೀವ್ರವಾದ ಆಕ್ಷೇಪವನ್ನು ದಾಖಲಿಸಬೇಕು. ವಿನೇಶ್ ಫೋಗಟ್‍ರವರಿಗೆ ಅಗತ್ಯವಾದ ಕಾನೂನಿನ ನೆರವು ನೀಡಬೇಕೆಂದು ಸೂಚಿಸಿರುವುದಲ್ಲದೆ, ಭಾರತೀಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಾಯ ನೀಡಿ ವಿನೇಶ್ ಫೋಗಟ್ ಪ್ರಕರಣದಲ್ಲಿ ಖುದ್ದಾಗಿ ಕಾಳಜಿ ತೆಗೆದುಕೊಳ್ಳಿ ಎಂದು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…