Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಪಾದಚಾರಿ ಮಾರ್ಗದಲ್ಲಿ ಖೇಲ್ ರತ್ನ ಪ್ರಶಸ್ತಿ ತೊರೆದ ವಿನೇಶ್ ಫೋಗಟ್!

ನವದೆಹಲಿ: ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ವಿವಾದದ ನಡುವೆ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ತೊರೆದು ಹೋಗಿದ್ದಾರೆ.

ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ತನ್ನ ಪ್ರಶಸ್ತಿಗಳನ್ನು ಪ್ರಧಾನ ಮಂತ್ರಿ ಕಚೇರಿಯ ಹೊರಗೆ ಬಿಡಲು ಪ್ರಯತ್ನಿಸಿದರು. ಆದರೆ, ಆಕೆಯನ್ನು ಕರ್ತವ್ಯ ಪಥದಲ್ಲಿ ಪೊಲೀಸರು ತಡೆದರು. ಇದರಿಂದಾಗಿ ಫೋಗಟ್ ತನ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದರು. 2020 ರಲ್ಲಿ ಖೇಲ್ ರತ್ನ ಮತ್ತು 2016 ರಲ್ಲಿ ಅರ್ಜುನ ಪ್ರಶಸ್ತಿ ಪಡೆದಿದ್ದರು.

ನ್ಯಾಯಕ್ಕಾಗಿ ಹರಸಾಹಸ ಪಡುತ್ತಿರುವ ಪ್ರಸ್ತುತ ಪರಿಸ್ಥಿತಿಯಲ್ಲಿ ಇಂತಹ ಗೌರವಗಳು ಅರ್ಥಹೀನವಾಗಿವೆ ಎಂದು ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದು ತಮಗೆ ಬಂದಿರುವ ಅರ್ಜುನ ಮತ್ತು ಖೇಲ್‌ ರತ್ನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಹೇಳಿದ್ದರು.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ದಲ್ಲಿ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ವಿರುದ್ಧ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಡೆಫಿಲಂಪಿಕ್ಸ್ ಚಾಂಪಿಯನ್ ವೀರೇಂದ್ರ ಸಿಂಗ್ ಯಾದವ್ ಪದ್ಮಶ್ರೀ ಪ್ರಶಸ್ತಿಗಳನ್ನು ಹಿಂದಿರುಗಿಸಿದ ಕೆಲವು ದಿನಗಳ ನಂತರ ಫೋಗಟ್ ಇಂದು ಮೆಡಲ್‌ ಕೈಬಿಡುವ ನಿರ್ಧಾರ ಕೈಗೊಂಡಿದ್ದಾರೆ.

ಸಂಜಯ್ ಸಿಂಗ್ ಕಳೆದ ವಾರ ಡಬ್ಲ್ಯುಎಫ್‌ಐ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಅವರು ಬ್ರಿಜ್ ಭೂಷಣ್ ಸಿಂಗ್ ಶರಣ್ ಅವರ ಸಹವರ್ತಿಯಾಗಿದ್ದರಿಂದ ಕುಸ್ತಿಪಟುಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬ್ರಿಜ್ ಭೂಷಣ್ ಮೇಲೆ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರು ಹಲವಾರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಪ್ರಕರಣ ಸದ್ಯ ದೆಹಲಿ ನ್ಯಾಯಾಲಯದಲ್ಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ