ನವದೆಹಲಿ: ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ವಿರುದ್ಧದ ಗೆಲುವು ಪ್ರಪಂಚದಾದ್ಯಂತದ ಇತರ ಮಹಿಳೆಯರು ತಮ್ಮ ಧ್ವನಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಕುಸ್ತಿಪಟು ವಿನೇಶ್ ಫೋಗಟ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆಂದು India today ವರದಿ ಮಾಡಿದೆ.
ಇಂದು (ಡಿಸೆಂಬರ್ 24) ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ (ಡಬ್ಲ್ಯುಎಫ್‌ಐ) ಇತ್ತೀಚೆಗೆ ನೇಮಕಗೊಂಡ ತಂಡವನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಇದರ ಬೆನ್ನಲ್ಲೇ ವಿನೇಶ್ ಪೋಗಾಟ್ ಅವರು ಈ ಹೇಳಿಕೆ ನೀಡಿದ್ದಾರೆ.
ಹೊಸ ಡಬ್ಲ್ಯುಎಫ್‌ಐ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ತರಾತುರಿಯಲ್ಲಿತ್ತು ಮತ್ತು ವ್ಯವಸ್ಥಿತ ಪ್ರಕ್ರಿಯೆಯನ್ನು ಅನುಸರಿಸಲಾಗಿಲ್ಲ ಎಂದು ಸಚಿವಾಲಯ ಹೇಳಿದ್ದು, ಸಂಜಯ್ ಸಿಂಗ್ ಡಬ್ಲ್ಯುಎಫ್‌ಐ ಮುಖ್ಯಸ್ಥರಾಗಿ ನೇಮಕಗೊಂಡ ಮೂರು ದಿನಗಳ ನಂತರ ಅಮಾನತುಗೊಳಿಸುವ ನಿರ್ಧಾರ ಕ್ರೀಡಾ ಸಚಿವಾಲಯ ತೆಗೆದುಕೊಂಡಿದೆ.
“ಹೊಸದಾಗಿ ಚುನಾಯಿತ ಸಂಸ್ಥೆಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣ ಇದ್ದಂತೆ ತೋರುತ್ತಿದೆ” ಎಂದು ಸಚಿವಾಲಯ ಹೇಳಿದೆ.
“ನಾವು ಸೋಲನ್ನು ಒಪ್ಪಿಕೊಂಡಿದ್ದರೆ, ಪ್ರಪಂಚದಾದ್ಯಂತ ಮಹಿಳೆಯರು, ಅದು ಕುಸ್ತಿ ಅಥವಾ ಯಾವುದೇ ಕ್ಷೇತ್ರವಾಗಿರಬಹುದು, ತಮ್ಮ ಧ್ವನಿಯನ್ನು ಎತ್ತಲು ಹೆಣಗಾಡುತ್ತಿದ್ದರು. WFI ಕುಸ್ತಿಪಟುಗಳಿಗೆ, ವಿಶೇಷವಾಗಿ ಮಹಿಳೆಯರಿಗೆ ಒಳ್ಳೆಯವರಾಗಿರಬೇಕು; ನಾವು ಇದನ್ನು ಮೊದಲಿನಿಂದಲೂ ಹೇಳುತ್ತಿದ್ದೇವೆ. ನಾವು ಸಹಿಸಿಕೊಂಡಿರುವ ವಿಷಯಗಳನ್ನು ಇತರರು ಸಹಿಸಿಕೊಳ್ಳಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ”. ಬ್ರಿಜ್ ಭೂಷಣ್ ಡಬ್ಲ್ಯುಎಫ್‌ಐ ಮುಖ್ಯಸ್ಥರಾಗಿದ್ದಾಗ ಕುಸ್ತಿಪಟುಗಳು ಸಹಿಸಿಕೊಂಡದ್ದನ್ನು ಮುಂದಿನ ತಲೆಮಾರಿನ ಕುಸ್ತಿಪಟುಗಳು ಅನುಭವಿಸಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…