ಮುಂಬೈ: ತಮ್ಮ ದುಬಾರಿ ಆಲಿಬಾಗ್ ತೋಟದ ಮನೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮ ಕ್ರಿಕೆಟ್ ಪಿಚ್ ಒಂದನ್ನು ನಿರ್ಮಿಸುವ ಉದ್ದೇಶ ಹೊಂದಿದ್ದಾರೆ ಎಂಬ ಪ್ರಮುಖ ಸುದ್ದಿ ಸಂಸ್ಥೆಯ ವರದಿಯನ್ನು ಸಾಮಾಜಿಕ ಮಾಧ್ಯಮ ಟಿಪ್ಪಣಿಯೊಂದರ ಮೂಲಕ ವಿರಾಟ್ ಕೊಹ್ಲಿ ಅಲ್ಲಗಳೆದಿದ್ದಾರೆ.
ಮಂಗಳವಾರ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ವಿರಾಟ್ ಕೊಹ್ಲಿ, ಈ ಕುರಿತ ಊಹಾಪೋಹಗಳನ್ನು ನಿವಾರಿಸಿದ್ದು, ಅಂತಹ ಯಾವುದೇ ಬೆಳವಣಿಗೆಯನ್ನು ನಕಲಿ ಸುದ್ದಿ ಎಂದು ಪ್ರತಿಪಾದಿಸಿದ್ದಾರೆ. “ಬಚ್ಪನ್ ಸೆ ಜೋ ಅಖ್ಬಾರ್ ಪಢಾ ಹೈ, ವೋ ಭಿ ಫೇಕ್ ನ್ಯೂಸ್ ಚಾಪ್ನೆ ಲಗೆ ಅಬ್ (ಬಾಲ್ಯದಿಂದ ನಾನು ಯಾವ ಪತ್ರಿಕೆಯನ್ನು ಓದುತ್ತಾ ಬರುತ್ತಿದ್ದೇನೆಯೋ, ಆ ಪತ್ರಿಕೆಯೂ ಈಗ ನಕಲಿ ಸುದ್ದಿಯನ್ನು ಮುದ್ರಿಸಲು ಶುರು ಮಾಡಿತು) ಎಂದು ತಮ್ಮ ಇನ್ಸ್ಟಾಗ್ರಾಮ್ ಸ್ಟೋರೀಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಐಷಾರಾಮಿ ತೋಟದ ಮನೆಯಲ್ಲಿ ಕ್ರಿಕೆಟ್ ಪಿಚ್ ಒಂದನ್ನು ನಿರ್ಮಿಸುವ ಆಸಕ್ತಿ ಹೊಂದಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದ ನಂತರ ಕೊಹ್ಲಿಯ ಈ ಪ್ರತಿಕ್ರಿಯೆ ಹೊರಬಿದ್ದಿದೆ. ಇನ್ಸ್ಟಾಗ್ರಾಮ್ ನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಕ್ರೀಡಾಪಟುಗಳ ಪೈಕಿ ಒಬ್ಬರಾಗಿರುವ ವಿರಾಟ್ ಕೊಹ್ಲಿ, ಫೋಟೊ ಮತ್ತು ವಿಡಿಯೊ ಹಂಚಿಕೆ ವೇದಿಕೆಯಾದ ಇನ್ಸ್ಟಾಗ್ರಾಮ್ ನಲ್ಲಿ 225 ದಶಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ.
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…