ಮುಂಬೈ: ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬಳಿಕ ಇದೀಗ ಕ್ರಿಕೆಟ್ ಲೋಕದ ಕಿಂಗ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ.
14 ವರ್ಷಗಳ ವೃತ್ತಿ ಜೀವನದ ನಂತರ ವಿರಾಟ್ ಕೊಹ್ಲಿ ಅವರು ಈ ಸ್ವರೂಪಕ್ಕೆ ವಿದಾಯ ಹೇಳಿದ್ದು, ತಮ್ಮ ಅನುಭವಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ನಾನು ಮೊದಲ ಬಾರಿಗೆ ಗುಡ್ಡೆಯ ನೀಲಿ ಜರ್ಸಿ ಧರಿಸಿ 14 ವರ್ಷಗಳಾಗಿವೆ. ನಿಜವಾಗಿಯೂ ಈ ಸ್ವರೂಪವು ನನ್ನನ್ನು ಎಲ್ಲಿ ಕೊಂಡೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ರೂಪಿಸಿದೆ ಮತ್ತು ಜೀವನಪೂರ್ತಿ ನೆನಪಿನಲ್ಲಿರುವ ಪಾಠಗಳನ್ನು ಕಲಿಸಿದೆ.
ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಏನೋ ಆತ್ಮೀಯವಾದದ್ದು ಇದೆ. ಸದ್ದಿಲ್ಲದ ಕಠಿಣ ಶ್ರಮ, ದೀರ್ಘ ದಿನಗಳು, ಯಾರಿಗೂ ಕಾಣದ ಆದರೆ ಶಾಶ್ವತವಾಗಿ ನಿಮ್ಮೊಂದಿಗಿರುವ ಸಣ್ಣ ಕ್ಷಣಗಳು.
ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ಮಂದಹಾಸದೊಂದಿಗೆ ನೆನಪಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…