ಹೊಸದಿಲ್ಲಿ : ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅವರು, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ.
ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 51 ಶತಕ ಹೊಡೆದಿದ್ದರು. ಕೊಹ್ಲಿ ಇಂದು 102 ಎಸೆತಗಳಲ್ಲಿ 52ನೇ ಶತಕ ಸಿಡಿಸಿ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.
ಇದನ್ನು ಓದಿ: ಅಂಧರ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಗೆದ್ದ ಭಾರತ
ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರು ಇವರು.
1.ವಿರಾಟ್ ಕೊಹ್ಲಿ(ಏಕದಿನ) – 52
2.ಸಚಿನ್ ತೆಂಡೂಲ್ಕರ್(ಟೆಸ್ಟ್)- 51
3.ಸಚಿನ್ ತೆಂಡೂಲ್ಕರ್ (ಏಕದಿನ) – 49
4. ಜಾಕ್ವೆಸ್ ಕಾಲಿಸ್ (ಟೆಸ್ಟ್)-45
5.ರಿಕಿ ಪಾಂಟಿಂಗ್ (ಟೆಸ್ಟ್) – 41
ವಿರಾಟ್ ಕೊಹ್ಲಿ 48 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರೆ 102 ಎಸೆತಗಳಲ್ಲಿ ಶತಕ ಹೊಡೆದರು. ಅಂತಿಮವಾಗಿ ಕೊಹ್ಲಿ 130 ರನ್(11 ಬೌಂಡರಿ, 7 ಸಿಕ್ಸ್) ಹೊಡೆದು ಔಟಾದರು.
ಎರಡನೇ ವಿಕೆಟ್‌ಗೆ ರೋಹಿತ್ ಶರ್ಮಾ ಮತ್ತು ಕೊಹ್ಲಿ 109 ಎಸೆತಗಳಿಗೆ 136 ರನ್ ಜೊತೆಯಾಟವಾಡಿದ್ದರೆ ನಾಲ್ಕನೇ ವಿಕೆಟಿಗೆ ಕೆಎಲ್ ರಾಹುಲ್ ಜೊತೆ 74 ಎಸೆತಗಳಲ್ಲಿ 76 ರನ್ ಜೊತೆಯಾಟವಾಡಿದರು. ಭಾರತದ ಮೊತ್ತ 25 ಆಗಿದ್ದಾಗ ಕ್ರೀಸ್‌ಗೆ ಆಗಮಿಸಿದ ಕೊಹ್ಲಿ ತಂಡದ ಸ್ಕೋರ್ 276 ಆಗಿದ್ದಾಗ ಕ್ಯಾಚ್ ನೀಡಿ ಔಟಾದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…