ಕ್ರೀಡೆ

ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ರವರ ಮತ್ತೊಂದು ದಾಖಲೆ ಮುರಿದ ವಿರಾಟ್‌ ಕೊಹ್ಲಿ

ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಖ್ಯಾತ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 25 ಸಾವಿರ ರನ್ ಕಲೆಹಾಕಿದ ಸಾಧನೆ ಮಾಡಿದ್ದಾರೆ. ಆ ಮೂಲಕ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 8 ರನ್ ಗಳಿಸಿದ್ದಾಗ ಅವರು ಈ ಸಾಧನೆ ಮಾಡಿದರು. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 44 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 20 ರನ್ ಗಳಿಸಿದರು.
2008ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕೊಹ್ಲಿ, ಈ ವರೆಗೆ 492 ಪಂದ್ಯಗಳ 549 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿ 25,012 ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಅತ್ಯಧಿಕ ರನ್ ಗಳಿಸಿದ ದಾಖಲೆ ಹೊಂದಿರುವ ದಿಗ್ಗಜ ಬ್ಯಾಟರ್ ಸಚಿನ್ ಅವರಿಗೆ 25 ಸಾವಿರ ರನ್ ಗಳಿಸಲು 577 ಇನ್ನಿಂಗ್ಸ್‌ಗಳು ಬೇಕಾಗಿದ್ದವು. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರು 588 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದರು.
ಕೊಹ್ಲಿ ಏಕದಿನ ಮಾದರಿಯಲ್ಲಿ 262 ಇನ್ನಿಂಗ್ಸ್‌ಗಳಿಂದ 12,809 ರನ್, ಟೆಸ್ಟ್ ಕ್ರಿಕೆಟ್‌ನಲ್ಲಿ 180 ಇನ್ನಿಂಗ್ಸ್‌ಗಳಿಂದ 8,195 ಮತ್ತು ಟಿ20 ಯಲ್ಲಿ 107 ಇನ್ನಿಂಗ್ಸ್‌ಗಳಿಂದ 4,008 ರನ್ ಗಳಿಸಿದ್ದಾರೆ.

ಅಧಿಕ ಸರಾಸರಿ ಹೊಂದಿರುವ ಕೊಹ್ಲಿ
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ವರೆಗೆ ಆರು ಬ್ಯಾಟರ್‌ಗಳಷ್ಟೇ 25 ಸಾವಿರಕ್ಕಿಂತ ಅಧಿಕ ರನ್ ಗಳಿಸಿದ್ದಾರೆ. ಈ ಎಲ್ಲ ಬ್ಯಾಟರ್‌ಗಳ ಪೈಕಿ ಕೊಹ್ಲಿ ಅತ್ಯುತ್ತಮ (53ಕ್ಕಿಂತ ಅಧಿಕ) ಸರಾಸರಿ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ ಅವರು 49.10 ಸರಾಸರಿ ಹೊಂದಿರುವುದೇ ಎರಡನೇ ಅತ್ಯುತ್ತಮ ಸರಾಸರಿಯಾಗಿದೆ. ಸಚಿನ್ ಬ್ಯಾಟಿಂಗ್ ಸರಾಸರಿ 48. 52ರ ಆಗಿದೆ.

ಕೊಹ್ಲಿ
492 ಪಂದ್ಯ
549 ಇನ್ನಿಂಗ್ಸ್
25,012 ರನ್

ಸಚಿನ್
520 ಪಂದ್ಯ
577 ಇನ್ನಿಂಗ್ಸ್
25,000 ರನ್

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

35 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago