ದುಬೈ: ಇಂದು ನಡೆಯುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯ ವಿರಾಟ್ ಕೊಹ್ಲಿಗೆ 300ನೇ ಅಂತರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದರೆ, ಈ ಸಾಧನೆ ಮಾಡಲಿರುವ ಭಾರತದ ಏಳನೇ ಬ್ಯಾಟರ್ ಎನಿಸಲಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಇದ್ದಾರೆ.
ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಈಚೆಗೆ ನಡೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಶತಕ ಗಳಿಸಿದ್ದರು.
ವಿರಾಟ್ ಕೊಹ್ಲಿ 2008ರಲ್ಲಿ ದಂಬುಲಾದಲ್ಲಿ ಶ್ರೀಲಂಕಾದ ಎದುರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಪ್ರಸ್ತುತ ಒಟ್ಟಾರೆ 299 ಪಂದ್ಯಗಳ ಮೂಲಕ 14,085 ರನ್ ಬಾರಿಸಿದ್ದಾರೆ.
300ಕ್ಕಿಂತ ಹೆಚ್ಚು ಪಂದ್ಯ ಆಡಿದ ಭಾರತೀಯರು:
ಪಂದ್ಯ ರನ್
* ಸಚಿನ್ ತೆಂಡೂಲ್ಕರ್ 463 18426
* ಮಹೇಂದ್ರ ಸಿಂಗ್ ಧೋನಿ 347 10599
* ರಾಹುಲ್ ದ್ರಾವಿಡ್ 340 10768
* ಮೊಹಮ್ಮದ್ ಅಜುರುದ್ದೀನ್ 334 9378
* ಸೌರವ್ ಗಂಗೂಲಿ 308 11221
* ಯುವರಾಜ್ ಸಿಂಗ್ 301 8609
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…