Categories: ಕ್ರೀಡೆ

ದಿಗ್ಗಜರ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್‌

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ.

ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. ಇತ್ತೀಚೆಗೆ ಭಾರತದಲ್ಲಿ ನಡೆದ ಟೆಸ್ಟ್‌ಗಳಲ್ಲಿ‌ ಉತ್ತಮ ಆಟ ಆಡುವಲ್ಲಿ ವಿಫಲರಾಗಿರುವ ವಿರಾಟ್‌ ಆಸ್ಟ್ರೇಲಿಯಾದಲ್ಲಿ ಫಾರ್ಮ್ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದಾರೆ.

ಬಾರ್ಡರ್-‌ ಗವಸ್ಕಾರ್‌ ಸರಣಿಯಲ್ಲಿ ವಿರಾಟ್‌ ಉತ್ತಮ ರನ್ ಕಲೆ ಹಾಕುವಲ್ಲಿ ಯಶಸ್ವಿಯಾದರೆ ಹಲವು ದಾಖಲೆಗಳು ಅವರ ಖಾತೆಯಲ್ಲಿ ಸೇರುತ್ತವೆ.

ಕ್ರಿಕೆಟ್‌ನ ದಿಗ್ಗಜ ಸಚಿನ್‌ ತೆಂಡೂಲ್ಕರ್ ಆಸ್ಟ್ರೇಲಿಯಾ ನೆಲದಲ್ಲಿ 1,809 ರನ್‌ ಗಳಿಸಿದ್ದಾರೆ. ವಿರಾಟ್‌ 458 ರನ್‌ ಗಳಿಸುವಲ್ಲಿ ಯಶಸ್ವಿಯಾದರೆ ಸಚಿನ್‌ ದಾಖಲೆ ಅಳಿಸಿ ಹಾಕಬಹುದು. ಈವರೆಗೆ ಕೊಹ್ಲಿ ಆಸ್ಟ್ರೇಲಿಯಾದಲ್ಲಿ 13 ಟೆಸ್ಟ್‌ ಪಂದ್ಯಗಳಿಂದ 54ರ ಸರಾಸರಿಯಲ್ಲಿ 1352 ರನ್‌ ಗಳಿಸಿದ್ದಾರೆ.

ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ ಪೂಜಾರ ಅವರು ಆಸ್ಟ್ರೇಲಿಯಾದ ವಿರುದ್ಧ 2074 ರನ್‌ ಗಳಿಸಿದ್ದಾರೆ. ಈ ಸರಣಿಯಲ್ಲಿ ವಿರಾಟ್‌ ಕೊಹ್ಲಿ 33 ರನ್‌ ಗಳಿಸಿದರೆ ಇವರ ದಾಖಲೆಯನ್ನು ಮುರಿಯುತ್ತಾರೆ.

ಭಾರತದ ಟೆಸ್ಟ್‌ ಕ್ರಿಕೆಟ್‌ನ ಗೋಡೆ ಎಂದೇ ಖ್ಯಾತಿಯಾಗಿರುವ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಈವರೆಗೆ ನಡೆದಿರುವ ಬಾರ್ಡರ್-ಗವಸ್ಕಾರ್‌ ಸರಣಿಯಲ್ಲಿ ಒಟ್ಟು 2143 ರನ್‌ ಗಳಿಸಿದ್ದಾರೆ. ವಿರಾಟ್‌ಗೆ ಈ ದಾಖಲೆಯನ್ನು ಮೆಟ್ಟಿನಿಲ್ಲಲು ಇನ್ನು 102 ರನ್‌ಗಳ ಆವಶ್ಯಕತೆ ಇದೆ.

ವಿರಾಟ್‌ ಕೊಹ್ಲಿ ಇಲ್ಲಿಯವರೆಗೆ ಆಸ್ಟ್ರೇಲಿಯಾದ ವಿರುದ್ಧ 25 ಟೆಸ್ಟ್‌ ಪಂದ್ಯಗಳಲ್ಲಿ 2042 ರನ್‌ಗಳಿಸಿದ್ದು, 47.48ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದಾರೆ. ಇದರಲ್ಲಿ 8 ಶತಕ ಹಾಗೂ 5 ಅರ್ಧಶತಕಗಳು ಇವರ ಬ್ಯಾಟ್‌ನಿಂದ ಬಂದಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

9 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

9 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

10 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

11 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

17 hours ago