ಕ್ರೀಡೆ

12 ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ವಿರಾಟ್‌ ಕೊಹ್ಲಿ

ನವದೆಹಲಿ: ಟೀಂ ಇಂಡಿಯಾದ ಬಹುಬೇಡಿಕೆಯ ಆಟಗಾರ ವಿರಾಟ್‌ ಕೊಹ್ಲಿ, 12 ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದು ದೆಹಲಿ ತಂಡದ ಪರವಾಗಿ ಮೈದಾನಕ್ಕಿಳಿದಿದ್ದಾರೆ.

ಇಂದು (ಜ.30) ಅರುಣ್‌ ಜೇಟ್ಲಿ ಮೈದಾನದಲ್ಲಿ ರೈಲ್ವೇಸ್‌ ತಂಡದ ವಿರುದ್ಧ ಆರಂಭವಾದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಮೈದಾನಕ್ಕಿಳಿದಿದ್ದಾರೆ. ಈ ವೇಳೆ ಸ್ಟೇಡಿಯಂ ಹೊರಗಡೆ ಅವರನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು ನೂಕುನುಗ್ಗಲು ಉಂಟಾಗಿ ಒಂದಿಬ್ಬರು ಕೆಳಕ್ಕೆ ಬಿದ್ದು ಗಾಯಗಳಾಗಿವೆ ಎಂದು ವರದಿಯಾಗಿದೆ.

ನಾನು 30 ವರ್ಷ ದೆಹಲಿ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದೇನೆ. ಆದರೆ ರಣಜಿ ಪಂದ್ಯವೊಂದರಲ್ಲಿ ಇಂತಹ ದೃಶ್ಯಗಳನ್ನು ನೋಡಿರಲಿಲ್ಲ. ಇದು ಕೊಹ್ಲಿ ಜನಪ್ರಿಯತೆಗೆ ಸಾಟಿಯಿಲ್ಲ ಎಂದು ತೋರಿಸುತ್ತದೆ ಎಂದು ಡಿಡಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಹ್ಲಿ ಕೊನೆಯದಾಗಿ 2012ರಲ್ಲಿ ಉತ್ತರ ಪ್ರದೇಶದ ವಿರುದ್ಧ ಆಡಿದ್ದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…

32 mins ago

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

1 hour ago

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

2 hours ago

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

2 hours ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

3 hours ago

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

3 hours ago