ಏಷ್ಯಾ ಕಪ್ನಲ್ಲಿ ಭರ್ಜರಿ ಶತಕದ ಮೂಲಕ ಫಾರ್ಮ್ಗೆ ಮರಳಿರುವ ವಿರಾಟ್ ವಿಶ್ವಕಪ್ ಸಿದ್ಧತೆಯಲ್ಲಿದ್ದಾರೆ. ಈ ನಡುವೆ ಅವರು ಹೊಸ ಹೇರ್ಸ್ಟ್ರೈಲ್ ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇವರು ಈ ನ್ಯೂ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಆಸ್ಟ್ರೇಲಿಯಾ ಸರಣಿಯ ಮೊದಲ ಟಿ20 ಪಂದ್ಯ ಪಂಜಾಬ್ನ ಮೊಹಾಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊಹಾಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿರಾಟ್ ಕೊಹ್ಲಿ ತಮ್ಮದೇ ಫ್ಯಾಷನ್ನಿಂದಾಗಿ ಗಮನ ಸೆಳೆದಿದ್ದಾರೆ. ರನ್ ಮಷಿನ್ ಹೊಸ ಹೇರ್ಸ್ಟೈಲ್ನಲ್ಲಿ ಮಿಂಚಿದ್ದಾರೆ. ವಿಶ್ವಕಪ್ಗೂ ಮೊದಲು ವಿರಾಟ್ರ ಹೊಸ ಹೇರ್ಸ್ಟ್ರೈಲ್ ಅಭಿಮಾನಿಗಳ ಗಮನ ಸೆಳೆದಿದೆ.ವಿರಾಟ್ ಕೊಹ್ಲಿ ಮೊಹಾಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಡಿಯೋವನ್ನು ಪಂಜಾಬ್ ಕ್ರಿಕೆಟ್ ಸಂಸ್ಥೆ(ಪಿಸಿಎ) ತನ್ನ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದೆ. ಹೊಸ ಕೂದಲ ವಿನ್ಯಾಸದಲ್ಲಿ ವಿರಾಟ್ ಮಿಂಚುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿವೆ.
ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆದ ರಶೀದ್ ಸಲ್ಮಾನಿ ಕೊಹ್ಲಿಯ ಕೂದಲಿಗೆ ಹೊಸ ಲುಕ್ ತಂದಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ರಶೀದ್ ತಮ್ಮ ಇನ್ಸ್ಟಾಮ್ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ತರಹೇವಾರಿಯಾಗಿ ಕಮೆಂಟ್ ಮಾಡಿದ್ದು, ಮೆಚ್ಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್ನಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿ 3 ವರ್ಷಗಳ ಬಳಿಕ ಅಂದರೆ 1020 ದಿನಗಳ ನಂತರ ಶತಕ ಬಾರಿಸಿ ಕಾಂಗರೂ ನಾಡಿನಲ್ಲಿ ನಡೆಯುವ ಟಿ20 ವಿಶ್ವಕಪ್ಗೆ ತಾವು ರೆಡಿ ಎಂಬ ಸಂದೇಶ ರವಾನೆ ಮಾಡಿದ್ದಾರೆ.
71 ನೇ ಶತಕವನ್ನು ದಾಖಲಿಸುವ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ರಿಕ್ಕಿ ಪಾಂಟಿಂಗ್ ಅವರ 71 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದರು. ವಿಶ್ವಕಪ್ನಲ್ಲಿ ಇನ್ನೊಂದು ಶತಕ ಬಾರಿಸಿದರೂ ವಿಶ್ವ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ 2 ನೇ ಸ್ಥಾನ ಸಂಪಾದಿಸಲಿದ್ದಾರೆ. ವಿರಾಟ್ಗೂ ಮೊದಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಶತಕಗಳ ಶತಕ ಶಿಖರವಿದೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…