ಕ್ರೀಡೆ

ವಿರಾಟ್‌ ಕೊಹ್ಲಿ ನ್ಯೂ ಹೇರ್​ಸ್ಟ್ರೈಲ್ ಗೆ ಅಭಿಮಾನಿಗಳು ಫಿದಾ

ಏಷ್ಯಾ ಕಪ್​ನಲ್ಲಿ ಭರ್ಜರಿ ಶತಕದ ಮೂಲಕ ಫಾರ್ಮ್​ಗೆ ಮರಳಿರುವ ವಿರಾಟ್​ ವಿಶ್ವಕಪ್​ ಸಿದ್ಧತೆಯಲ್ಲಿದ್ದಾರೆ. ಈ ನಡುವೆ ಅವರು ಹೊಸ ಹೇರ್​ಸ್ಟ್ರೈಲ್​  ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇವರು ಈ ನ್ಯೂ ಲುಕ್‌ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಆಸ್ಟ್ರೇಲಿಯಾ ಸರಣಿಯ ಮೊದಲ ಟಿ20 ಪಂದ್ಯ ಪಂಜಾಬ್​ನ ಮೊಹಾಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊಹಾಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿರಾಟ್​ ಕೊಹ್ಲಿ ತಮ್ಮದೇ ಫ್ಯಾಷನ್​ನಿಂದಾಗಿ ಗಮನ ಸೆಳೆದಿದ್ದಾರೆ. ರನ್​ ಮಷಿನ್​ ಹೊಸ ಹೇರ್​ಸ್ಟೈಲ್​ನಲ್ಲಿ ಮಿಂಚಿದ್ದಾರೆ. ವಿಶ್ವಕಪ್​ಗೂ ಮೊದಲು ವಿರಾಟ್​ರ ಹೊಸ ಹೇರ್​ಸ್ಟ್ರೈಲ್​ ಅಭಿಮಾನಿಗಳ ಗಮನ ಸೆಳೆದಿದೆ.ವಿರಾಟ್​ ಕೊಹ್ಲಿ ಮೊಹಾಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಡಿಯೋವನ್ನು ಪಂಜಾಬ್​ ಕ್ರಿಕೆಟ್​ ಸಂಸ್ಥೆ(ಪಿಸಿಎ) ತನ್ನ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ಹೊಸ ಕೂದಲ ವಿನ್ಯಾಸದಲ್ಲಿ ವಿರಾಟ್​ ಮಿಂಚುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗುತ್ತಿವೆ.

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆದ ರಶೀದ್ ಸಲ್ಮಾನಿ ಕೊಹ್ಲಿಯ ಕೂದಲಿಗೆ ಹೊಸ ಲುಕ್ ತಂದಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ರಶೀದ್​ ತಮ್ಮ ಇನ್‌ಸ್ಟಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ತರಹೇವಾರಿಯಾಗಿ ಕಮೆಂಟ್​ ಮಾಡಿದ್ದು, ಮೆಚ್ಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್​ನಲ್ಲಿ ರನ್ ಮಷಿನ್ ವಿರಾಟ್​ ಕೊಹ್ಲಿ 3 ವರ್ಷಗಳ ಬಳಿಕ ಅಂದರೆ 1020 ದಿನಗಳ ನಂತರ ಶತಕ ಬಾರಿಸಿ ಕಾಂಗರೂ ನಾಡಿನಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ ತಾವು ರೆಡಿ ಎಂಬ ಸಂದೇಶ ರವಾನೆ ಮಾಡಿದ್ದಾರೆ.
71 ನೇ ಶತಕವನ್ನು ದಾಖಲಿಸುವ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ರಿಕ್ಕಿ ಪಾಂಟಿಂಗ್​ ಅವರ 71 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದರು. ವಿಶ್ವಕಪ್​ನಲ್ಲಿ ಇನ್ನೊಂದು ಶತಕ ಬಾರಿಸಿದರೂ ವಿಶ್ವ ಕ್ರಿಕೆಟ್​ನಲ್ಲಿ ಅತಿಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ 2 ನೇ ಸ್ಥಾನ ಸಂಪಾದಿಸಲಿದ್ದಾರೆ. ವಿರಾಟ್​ಗೂ ಮೊದಲು ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಶತಕಗಳ ಶತಕ ಶಿಖರವಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago