ಬೆಂಗಳೂರು : ಟ್ವೆಂಟಿ-20 ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಆರ್.ಸಿ.ಬಿ ವಿಜಯೋತ್ಸವ ಆಚರಣೆ ವೇಳೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಅಭಿಮಾನಿಗಳ ಸಾವು-ನೋವಿಗೆ ಟೀಂ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ತೀವ್ರ ಕಂಬನಿ ಮಿಡಿದಿದ್ದಾರೆ.
ತಮ್ಮ ನೋವಿನ ಜೊತೆಗೆ ಕೊಹ್ಲಿ, ಆರ್.ಸಿ.ಬಿ ನೋವಿನ ಸಂದೇಶವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸಂಭವಿಸಿದ ದುರಂತದ ಬಗ್ಗೆ ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಸಾವು-ನೋವಿನಿಂದ ತೀವ್ರ ದುಃಖಿತನಾಗಿದ್ದೇನೆ. ಬಾಯಿಂದ ಮಾತುಗಳೇ ಹೊರಡುತ್ತಿಲ್ಲ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ, ಬೆಂಗಳೂರಿನಾದ್ಯಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಅಲ್ಲಿ ನಡೆದ ಅನಾಹುತದ ನಡೆದಿದೆ.
ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ. ಪ್ರಾಣ ಕಳೆದುಕೊಂಡವರಿಗೆ ಆರ್.ಸಿ.ಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ಮುಗಿಸಿದ್ದೇವೆ ಮತ್ತು ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ದಯವಿಟ್ಟು ಸುರಕ್ಷಿತವಾಗಿರುವಂತೆ ನಮ್ಮ ಅಭಿಮಾನಿಗಳಿಗೆ ನಾವು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಆರ್.ಸಿ.ಬಿ ಕೂಡ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಜೀವಹಾನಿಗೆ ಆರ್.ಸಿ.ಬಿ ತಂಡ ಶೋಕ ವ್ಯಕ್ತಪಡಿಸುತ್ತದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪಗಳು. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ತಿದ್ದುಪಡಿ ಮಾಡಿದ್ದೇವೆ. ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ಆರ್.ಸಿ.ಬಿ ಅಭಿಮಾನಿಗಳು ದಯವಿಟ್ಟು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದೆ.