ಮುಂಬೈ: ಡಿಸೆಂಬರ್ ೨೬ ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭಗೊಳ್ಳಲಿದ್ದು, ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ, ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.
ಕೌಟುಂಬಿಕ ತುರ್ತು ಕಾರಣಗಳಿಗಾಗಿ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದಿಂದ ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.
ಟೀಂ ಇಂಡಿಯಾ ಆಡಳಿತ ಮಂಡಳಿಯ ಅನುಮತಿ ಪಡೆದು ಮೂರು ದಿನಗಳ ಹಿಂದೆ ಮುಂಬೈಗೆ ಮರಳಿದ್ದರು. ಪ್ರಿಟೋರಿಯಾದಲ್ಲಿ ಗುರುವಾರ ನಡೆದ ಮೂರನೆ ಹಾಗೂ ಅಂತಿಮ ಪಂದ್ಯದ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿಲ್ಲ. ಯಾವ ಕೌಟುಂಬಿಕ ತುರ್ತು ಕಾರಣಕ್ಕಾಗಿ ವಿರಾಟ್ ಮರಳಿದ್ದಾರೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದಿದ್ದರೂ, ಅವರು ಡಿಸೆಂಬರ್ 22ರಂದು ಮತ್ತೆ ದಕ್ಷಿಣ ಆಫ್ರಿಕಾಗೆ ಮರಳಲಿದ್ದಾರೆ ಎಂದು Crickbuzz ವರದಿ ಮಾಡಿದೆ.
ನಾಯಕ ರೋಹಿತ್ ಶರ್ಮಾ ಮತ್ತು ಬ್ಯಾಟರ್ ವಿರಾಟ್ ಕೊಹ್ಲಿ ಅವರಿಗೆ ಟಿ-20 ಸರಣಿ ಹಾಗೂ ಏಕದಿನ ಪಂದ್ಯಗಳ ಸರಣಿಗಳಿಂದ ಬಿಸಿಸಿಐ ವಿಶ್ರಾಂತಿ ನೀಡಿತ್ತು.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…