Mysore
20
overcast clouds
Light
Dark

ಟಿ20 ಕ್ರಿಕೆಟ್‌ನಲ್ಲಿ ವಿಶಿಷ್ಟ ಸಾಧನೆ ಬರೆದ ವಿರಾಟ್‌ ಕೊಹ್ಲಿ!

ಬೆಂಗಳೂರು: ಟೀಂ ಇಂಡಿಯಾದ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರು ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ವಿಶೇಷ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅವರು 100ನೇ ಸಲ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಮಾ.೨೫) ನಡದ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಕೊಹ್ಲಿ ಈವರೆಗೆ 378 ಟಿ20 ಪಂದ್ಯಗಳನ್ನಾಡಿದ್ದು, ಅದರಲ್ಲಿ 92 ಅರ್ಧಶತಕ ಹಾಗೂ ಎಂಟು ಶತಕಗಳನ್ನು ಗಳಿಸಿದ್ದಾರೆ. ಆ ಮೂಲಕ ಭಾರತೀಯ ಬ್ಯಾಟರ್‌ ಒಬ್ಬರು ಟಿ20 ಕ್ರಿಕೆಟ್‌ನಲ್ಲಿ 100ನೇ ಸಲ 50 ರನ್‌ ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮತ್ತು ಒಟ್ಟಾರೆಯಾಗಿ ಟಿ20 ಕ್ರಿಕೆಟ್‌ನಲ್ಲಿ 100ನೇ ಬಾರಿ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50 ಪ್ಲಸ್ ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ, ವೆಸ್ಟ್‌ಇಂಡೀಸ್‌ನ ದಿಗ್ಗಜ ಕ್ರಿಸ್ ಗೇಲ್ (22 ಶತಕ ಸೇರಿದಂತೆ 110 ಸಲ 50 ಪ್ಲಸ್ ರನ್) ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ (8 ಶತಕ ಸೇರಿದಂತೆ 109 ಸಲ 50 ಪ್ಲಸ್ ರನ್). ನಂತರದ ಸ್ಥಾನದಲ್ಲಿ ಕಿಂಗ್‌ ಕೊಹ್ಲಿ ಕಾಣಿಸಿಕೊಂಡಿದ್ದಾರೆ.