ಬೆಂಗಳೂರು: ಟೀಂ ಇಂಡಿಯಾದ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರು ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ವಿಶೇಷ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅವರು 100ನೇ ಸಲ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಮಾ.೨೫) ನಡದ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.
ಕೊಹ್ಲಿ ಈವರೆಗೆ 378 ಟಿ20 ಪಂದ್ಯಗಳನ್ನಾಡಿದ್ದು, ಅದರಲ್ಲಿ 92 ಅರ್ಧಶತಕ ಹಾಗೂ ಎಂಟು ಶತಕಗಳನ್ನು ಗಳಿಸಿದ್ದಾರೆ. ಆ ಮೂಲಕ ಭಾರತೀಯ ಬ್ಯಾಟರ್ ಒಬ್ಬರು ಟಿ20 ಕ್ರಿಕೆಟ್‌ನಲ್ಲಿ 100ನೇ ಸಲ 50 ರನ್ ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮತ್ತು ಒಟ್ಟಾರೆಯಾಗಿ ಟಿ20 ಕ್ರಿಕೆಟ್‌ನಲ್ಲಿ 100ನೇ ಬಾರಿ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50 ಪ್ಲಸ್ ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ, ವೆಸ್ಟ್‌ಇಂಡೀಸ್‌ನ ದಿಗ್ಗಜ ಕ್ರಿಸ್ ಗೇಲ್ (22 ಶತಕ ಸೇರಿದಂತೆ 110 ಸಲ 50 ಪ್ಲಸ್ ರನ್) ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ (8 ಶತಕ ಸೇರಿದಂತೆ 109 ಸಲ 50 ಪ್ಲಸ್ ರನ್). ನಂತರದ ಸ್ಥಾನದಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ.
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…