ನವದೆಹಲಿ: ಟಿ20 ವಿಶ್ವಕಪ್‌ನಲ್ಲಿ ಈ ಆಟಗಾರನನ್ನು ಟೀಂ ಇಂಡಿಯಾ ತಂಡದಲ್ಲಿ ರೋಹಿತ್ ಶರ್ಮಾಗೆ ಜೊತೆಯಾಗಿ ಬ್ಯಾಟಿಂಗ್ ಮಾಡಲು ಕಳುಹಿಸಬೇಕು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಸಕ್ತ ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನೊಂದಿಗೆ ಬ್ಯಾಟ್ ಬೀಸುತ್ತಿರುವ ವಿರಾಟ್ ಕೊಹ್ಲಿ ಕುರಿತು ದಾದಾ ಈ ಹೇಳಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಯಾವುದು ಸರಿಯಿಲ್ಲ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಜಗಜ್ಜಾಹಿರಾಗಿರುವ ವಿಷಯವಾಗಿದೆ. ಆಗಿದ್ದರೂ ದಾದಾ ವಿರಾಟ್ ಪರ ಬ್ಯಾಟ್ ಬೀಸಿರುವುದು ಅಚ್ಚರಿಗೆ ಕಾರಣವಾಗಿದೆ.
ಖಾಸಗಿ ಕಾರ್ಯಕ್ರಮವೊಂದಲ್ಲಿ ಮಾತನಾಡಿರುವ ಗಂಗೂಲಿ, ವಿರಾಟ್ ಬ್ಯಾಟಿಂಗ್ ನಲ್ಲಿ ಅತ್ಯುತ್ತಮವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಐಪಿಎಲ್‌ನಲ್ಲಿ ಕೆಲವು ಇನ್ನಿಂಗ್ಸ್‌ಗಳು ಅದ್ಭುತವಾಗಿ ಮೂಡಿ ಬಂದಿದೆ. ಅವರ ಈ ಫಾರ್ಮ್ ಹೀಗೆ ಮುಂದುವರೆಯಲಿದ್ದು, ಟಿ20 ವಿಶ್ವಕಪ್‌ನಲ್ಲಿ ಅವರನ್ನು ಆರಂಭಿಕರನ್ನಾಗಿ ಕಣಕ್ಕಿಳಿಸುವುದು ಉತ್ತಮ ಎಂದು ಹೇಳಿದ್ದಾರೆ.
ಜೊತೆಗೆ ವಿಶ್ವಕಪ್ ತಂಡ ಆಯ್ಕೆ ಬಗ್ಗೆಯೂ ಮೆಚ್ಚುಗೆ ಮಾತುಗಳನ್ನಾಡಿರುವ ಅವರು, ಬ್ಯಾಟಂಗ್, ಬೌಲಿಂಗ್ ಸೇರಿದಂತೆ ಗಟ್ಟಿಯಾದ ಉತ್ತಮ ತಂಡವನ್ನೇ ಕಟ್ಟಲಾಗಿದೆ. ಈ ತಂಡದ ಸಹಾಯದಿಂದ 17 ವರ್ಷಗಳ ಟ್ರೋಫಿ ಬರ ನೀಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಐಪಿಎಲ್‌ನಲ್ಲಿ ಈವರೆಗೆ ವಿರಾಟ್ 12 ಪಂದ್ಯಗಳನ್ನಾಡಿದ್ದು, 70.44ರ ಸರಾಸರಿಯಲ್ಲಿ 634 ರನ್ ಬಾರಿಸಿ ಟೂರ್ನಿಯಲ್ಲಿ ಲೀಡಿಂಗ್ ರನ್ ಸ್ಕೋರರ್ ಆಗಿದ್ದಾರೆ.
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…