Mysore
31
overcast clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಟಿ20ಐ ನಿವೃತ್ತಿಯೊಂದಿಗೆ ಅನಗತ್ಯ ದಾಖಲೆ ಬರೆದ ವಿರಾಟ್‌ ಕೊಹ್ಲಿ!

ಬಾರ್ಬಡೋಸ್‌: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ, ಭಾರತ ತಂಡದ ಮಾಜಿ ಕಪ್ತಾನ್‌ ವಿರಾಟ್‌ ಕೊಹ್ಲಿ ಟಿ20 ವಿಶ್ವಕಪ್‌ಗೆ ವಿದಾಯ ಘೋಷಿಸಿದ್ದಾರೆ.

ತಂಡಕ್ಕಾಗಿ ನಿಧಾನಗತಿಯಿಂದ ಇನ್ನಿಂಗ್ಸ್‌ ಕಟ್ಟಿದ ವಿರಾಟ್‌ 59 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 76 ರನ್‌ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ ವಿರಾಟ್‌ ಕೊಹ್ಲಿ ಅರ್ಧಶತಕ ದಾಖಲಿಸಲು 48 ಎಸೆತಗಳನ್ನು ತೆಗೆದುಕೊಂಡಿದ್ದರು. ಆ ಮೂಲಕ ಟಿ20 ವಿಶ್ವಕಪ್‌ನಲ್ಲಿ ಮಂದಗತಿಯ ಅರ್ಧಶತಕ ಬಾರಿಸಿ ಟೀಂ ಇಂಡಿಯಾ ಆಟಗಾರ ಎಂಬ ಅನಗತ್ಯ ದಾಖಲೆ ಬರೆದರು.

ಹಾಗೂ ವಿಶ್ವಕಪ್‌ ಫೈನಲ್‌ನಲ್ಲಿ ಅರ್ಧಶತಕ ಗಳಿಸಲು ಅತೀಹೆಚ್ಚು ಎಸೆತಗಳನ್ನು ಎದುರಿಸಿದ ಎರಡನೇ ಆಟಗಾರ ಎಂಬ ದಾಖಲೆಯನ್ನು ಸಹಾ ತಮ್ಮದಾಗಿಸಿಕೊಂಡರು ವಿರಾಟ್‌. 2010 ರಲ್ಲಿ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್‌ ಹಸ್ಸಿ ಮೊದಲ ಸ್ಥಾನದಲ್ಲಿದ್ದಾರೆ.

Tags:
error: Content is protected !!