ಬಾರ್ಬಡೋಸ್: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ, ಭಾರತ ತಂಡದ ಮಾಜಿ ಕಪ್ತಾನ್ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ಗೆ ವಿದಾಯ ಘೋಷಿಸಿದ್ದಾರೆ.
ತಂಡಕ್ಕಾಗಿ ನಿಧಾನಗತಿಯಿಂದ ಇನ್ನಿಂಗ್ಸ್ ಕಟ್ಟಿದ ವಿರಾಟ್ 59 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ದಾಖಲಿಸಲು 48 ಎಸೆತಗಳನ್ನು ತೆಗೆದುಕೊಂಡಿದ್ದರು. ಆ ಮೂಲಕ ಟಿ20 ವಿಶ್ವಕಪ್‌ನಲ್ಲಿ ಮಂದಗತಿಯ ಅರ್ಧಶತಕ ಬಾರಿಸಿ ಟೀಂ ಇಂಡಿಯಾ ಆಟಗಾರ ಎಂಬ ಅನಗತ್ಯ ದಾಖಲೆ ಬರೆದರು.
ಹಾಗೂ ವಿಶ್ವಕಪ್ ಫೈನಲ್‌ನಲ್ಲಿ ಅರ್ಧಶತಕ ಗಳಿಸಲು ಅತೀಹೆಚ್ಚು ಎಸೆತಗಳನ್ನು ಎದುರಿಸಿದ ಎರಡನೇ ಆಟಗಾರ ಎಂಬ ದಾಖಲೆಯನ್ನು ಸಹಾ ತಮ್ಮದಾಗಿಸಿಕೊಂಡರು ವಿರಾಟ್. 2010 ರಲ್ಲಿ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಹಸ್ಸಿ ಮೊದಲ ಸ್ಥಾನದಲ್ಲಿದ್ದಾರೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…