Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಟೀಂ ಇಂಡಿಯಾ ಪರ ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ!

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ವಿರುದ್ಧದ ಅಂತಿಮ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು, ಅಫ್ಘಾನ್‌ ವಿರುದ್ಧ ಅಜೇಯ ದಾಖಲೆ ನಿರ್ಮಿಸಿತು. ಆದರೆ, ಇದೆ ಪಂದ್ಯದಲ್ಲಿ ಟೀಂ ಇಂಡಿಯಾದ ರನ್‌ ಮೆಷಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟೀಂ ಇಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಎಡಗೈ ವೇಗಿ ಫರೀದ್ ಅಹ್ಮದ್‌ರ ಮೊದಲ ಎಸೆತದಲ್ಲೇ ಔಟ್ ಮಾಡುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಗೋಲ್ಡನ್ ಡಕ್​ಗೆ ಔಟಾಗುವುದರೊಂದಿಗೆ ಅತ್ಯಂತ ಕಳಪೆ ದಾಖಲೆಯೊಂದನ್ನು ಕೊಹ್ಲಿ ತಮ್ಮದಾಗಿಸಿಕೊಂಡರು.

ಆ ಮೂಲಕ ಭಾರತ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅನಗತ್ಯ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. ಮೊದಲು ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 782 ಇನಿಂಗ್ಸ್ ಆಡಿ, 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅತೀ ಹೆಚ್ಚು ಬಾರಿ ಡಕ್​ ಔಟ್ ಆದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ಸಚಿನ್ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ 522 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 580 ಇನಿಂಗ್ಸ್​ಗಳಲ್ಲಿ ಒಟ್ಟು 35 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!