ಕ್ರೀಡೆ

ವಿರಾಟ್ ಕೊಹ್ಲಿಯ ಅತಿದೊಡ್ಡ ದಾಖಲೆ ಮುರಿದ ಡೇವಿಡ್ ವಾರ್ನರ್

ನವದೆಹಲಿ : ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್‌ ವಾರ್ನರ್‌, ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ಅತಿದೊಡ್ಡ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ 500+ ರನ್ ಬಾರಿಸಿದ ಬ್ಯಾಟರ್ ಎನ್ನುವ ಹಿರಿಮೆಗೆ ಎಡಗೈ ಬ್ಯಾಟರ್ ಡೇವಿಡ್ ವಾರ್ನರ್ ಪಾತ್ರರಾಗಿದ್ದಾರೆ.

ಇಲ್ಲಿನ ಅರುಣ್‌ ಜೇಟ್ಲಿ ಮೈದಾನದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್‌ ಎದುರಿನ ಡೆಲ್ಲಿ ಕ್ಯಾಪಿಟಲ್ಸ್ ಪಾಲಿನ ಕೊನೆಯ ಲೀಗ್ ಪಂದ್ಯದಲ್ಲಿ ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ್ದಾರೆ. ಚೆನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಡೇವಿಡ್‌ ವಾರ್ನರ್ ಕೇವಲ 58 ಎಸೆತಗಳನ್ನು ಎದುರಿಸಿ ಕೆಚ್ಚೆದೆಯ 86 ರನ್ ಬಾರಿಸಿದರು. ಈ ಇನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ 5 ಸಿಕ್ಸರ್‌ಗಳು ಸೇರಿದ್ದವು. ಇದರ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ಎದುರು ಡೆಲ್ಲಿ ಕ್ಯಾಪಿಟಲ್ಸ್ ತಂಡವು 77 ರನ್ ಅಂತರದ ಹೀನಾಯ ಸೋಲು ಅನುಭವಿಸಿತು.

ಡೇವಿಡ್ ವಾರ್ನರ್ ದಾಖಲೆ : ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೇವಿಡ್ ವಾರ್ನರ್‌ 14 ಪಂದ್ಯಗಳನ್ನಾಡಿ 36.85ರ ಬ್ಯಾಟಿಂಗ್ ಸರಾಸರಿಯಲ್ಲಿ 516 ರನ್ ಸಿಡಿಸಿದ್ದಾರೆ. ಈ ಆವೃತ್ತಿಯಲ್ಲಿ ವಾರ್ನರ್‌ 6 ಅರ್ಧಶತಕ ಬಾರಿಸಿದ್ದು, 86 ರನ್‌ ಈ ಸೀಸನ್‌ನಲ್ಲಿ ವಾರ್ನರ್‌ ಬ್ಯಾಟಿಂದ ದಾಖಲಾದ ವೈಯುಕ್ತಿಕ ಗರಿಷ್ಠ ಸ್ಕೋರ್ ಎನಿಸಿಕೊಂಡಿತು. ಇನ್ನು ಡೇವಿಡ್ ವಾರ್ನರ್, ಇದೀಗ ವಿರಾಟ್ ಕೊಹ್ಲಿ ಹಿಂದಿಕ್ಕಿ ಏಳನೇ ಬಾರಿಗೆ ಐಪಿಎಲ್‌ ಆವೃತ್ತಿಯಲ್ಲಿ 500+ ರನ್ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನ್ನುವ ಅಪರೂಪದ ದಾಖಲೆಗೆ ವಾರ್ನರ್ ಪಾತ್ರರಾಗಿದ್ದಾರೆ.

ಈ ಮೊದಲು ಡೇವಿಡ್ ವಾರ್ನರ್ 2014(528 ರನ್), 2015(562 ರನ್& ಆರೆಂಜ್ ಕ್ಯಾಪ್), 2016(848 ರನ್), 2017(641 ರನ್‌& ಆರೆಂಜ್ ಕ್ಯಾಪ್), 2019(692 ರನ್ & ಆರೆಂಜ್ ಕ್ಯಾಪ್‌) ಹಾಗೂ 2020ರಲ್ಲಿ 548 ರನ್ ಸಿಡಿಸಿದ್ದರು.

ಇನ್ನು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ರನ್ ಮಷೀನ್ ವಿರಾಟ್ ಕೊಹ್ಲಿ, 6 ಬಾರಿ 500+ ರನ್ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ 2011(557 ರನ್), 2013(634 ರನ್), 2015(505 ರನ್), 2016(973 ರನ್& ಆರೆಂಜ್ ಕ್ಯಾಪ್), 2018(530 ರನ್) ಹಾಗೂ 2023ರಲ್ಲಿ ಈಗಾಗಲೇ 538 ರನ್ ಬಾರಿಸಿದ್ದಾರೆ.

ಇನ್ನುಳಿದಂತೆ ಪಂಜಾಬ್ ಕಿಂಗ್ಸ್‌ ತಂಡದ ನಾಯಕ ಶಿಖರ್ ಧವನ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ ಎಲ್ ರಾಹುಲ್, ಐಪಿಎಲ್‌ನಲ್ಲಿ 5 ಬಾರಿ 500+ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾ ಮೂಲದ ಸ್ಪೋಟಕ ಆರಂಭಿಕ ಬ್ಯಾಟರ್‌ ಡೇವಿಡ್ ವಾರ್ನರ್, ಐಪಿಎಲ್‌ ಇತಿಹಾಸದಲ್ಲಿ ಗರಿಷ್ಠ ರನ್‌ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ ಇದುವರೆಗೂ 176 ಪಂದ್ಯಗಳನ್ನಾಡಿ 41.54ರ ಬ್ಯಾಟಿಂಗ್ ಸರಾಸರಿಯಲ್ಲಿ 6,397 ರನ್ ಬಾರಿಸಿದ್ದಾರೆ. ಇದರಲ್ಲಿ 4 ಶತಕ ಹಾಗೂ 61 ಅರ್ಧಶತಕಗಳು ಸೇರಿವೆ. ಇನ್ನು ಐಪಿಎಲ್‌ ಇತಿಹಾಸದಲ್ಲಿ ಗರಿಷ್ಠ ರನ್ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ವಿರಾಟ್ ಕೊಹ್ಲಿ(7162) ರನ್ ಬಾರಿಸಿ ಮೊದಲ ಸ್ಥಾನದಲ್ಲಿದ್ದರೆ.

lokesh

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

4 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

5 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

5 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

6 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

6 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

6 hours ago