ಕ್ರೀಡೆ

ವಿರಾಟ್ ಕೊಹ್ಲಿ ಅಮೋಘ ಶತಕ: ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 327 ರನ್‌ ಗುರಿ

ಕೋಲ್ಕತ್ತಾ : ಐಸಿಸಿ ವಿಶ್ವಕಪ್ 2023ರ 37ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು. ಇದೀಗ ಭಾರತವನ್ನು ಸೋಲಿಸಲು ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 327 ರನ್ ಗಳಿಸಬೇಕಾಗಿದೆ. ಭಾರತದ ಪರ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡಿ 49ನೇ ಶತಕ ದಾಖಲಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ಗರಿಷ್ಠ 49 ಶತಕಗಳನ್ನು ಸರಿಗಟ್ಟಿದ್ದಾರೆ.

ಭಾರತಕ್ಕೆ ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಉತ್ತಮ ಆರಂಭವನ್ನು ನೀಡಿದರು. ತಂಡವು 4.3 ಓವರ್‌ಗಳಲ್ಲಿ 50 ರನ್ ಪೂರೈಸಿತು. ರೋಹಿತ್ ಶರ್ಮಾ 24 ಎಸೆತಗಳಲ್ಲಿ 6 ಸ್ಫೋಟಕ ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 40 ರನ್ ಗಳಿಸಿದರು. ಕಗಿಸೊ ರಬಾಡ ರೋಹಿತ್‌ ಶರ್ಮಾರನ್ನು ಔಟ್ ಮಾಡುವ ಮೂಲಕ ಆಫ್ರಿಕಾಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದಾದ ಬಳಿಕ ಶುಭಮನ್ ಗಿಲ್ ಕೂಡ ದೊಡ್ಡ ಇನ್ನಿಂಗ್ಸ್ ಆಡಲಾಗದೆ 23 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಇದಾದ ನಂತರ ವಿರಾಟ್ ಕೊಹ್ಲಿ ಅವರು ಶ್ರೇಯಸ್ ಅಯ್ಯರ್ ಜೊತೆಗೂಡಿ ಇನ್ನಿಂಗ್ಸ್ ಕೈಗೆತ್ತಿಕೊಂಡು ಸ್ಕೋರ್ ಹೆಚ್ಚಿಸಿದರು.

227 ರನ್‌ಗಳಿದ್ದಾಗ 37ನೇ ಓವರ್‌ನ ಐದನೇ ಎಸೆತದಲ್ಲಿ ಭಾರತಕ್ಕೆ ಮೂರನೇ ಹೊಡೆತ ಶ್ರೇಯಸ್ ಅಯ್ಯರ್ ರೂಪದಲ್ಲಿ ಬಂದಿತು. ಅಯ್ಯರ್ 87 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸ್ಫೋಟಕ ಸಿಕ್ಸರ್‌ಗಳೊಂದಿಗೆ 77 ರನ್ ಗಳಿಸಿ ಲುಂಗಿ ಎನ್‌ಗಿಡಿ ಎಸೆತದಲ್ಲಿ ಮಾರ್ಕ್‌ರಾಮ್‌ಗೆ ಕ್ಯಾಚಿತ್ತು ಔಟಾದರು. ಇದಾದ ಬಳಿಕ ಕೆಎಲ್ ರಾಹುಲ್ 8 ರನ್ ಗಳಿಸಿ ಔಟಾದರು. 14 ಎಸೆತಗಳಲ್ಲಿ 22 ರನ್ ಗಳಿಸಿ ಸೂರ್ಯಕುಮಾರ್ ಯಾದವ್ ಔಟಾದರು. ನಂತರ ಬಂದ ರವೀಂದ್ರ ಜಡೇಜಾ 15 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 19 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ 119 ಎಸೆತಗಳಲ್ಲಿ 10 ಬೌಂಡರಿಗಳ ನೆರವಿನಿಂದ ತಮ್ಮ ODI ವೃತ್ತಿಜೀವನದ 49ನೇ ಶತಕ ದಾಖಲಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ 121 ಎಸೆತಗಳಲ್ಲಿ 10 ಎಸೆತಗಳಲ್ಲಿ 101 ರನ್ ಗಳಿಸಿದರು.

35ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಈ ಶತಕ ಬಂದಿದೆ. ಇದು ಅವರ ODI ವೃತ್ತಿಜೀವನದ 49ನೇ ಶತಕ ಮತ್ತು ವಿಶ್ವಕಪ್ 2023ರಲ್ಲಿ ಎರಡನೇ ಶತಕವಾಗಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

8 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

35 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago