ನವದೆಹಲಿ: ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಆಹಾರದ ಮೇಲಿನ ವ್ಯಾಮೋಹ ವಿಶ್ವದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ಚೆನ್ನಾಗಿಯೇ ತಿಳಿದಿದೆ. ಧೋನಿ ಅವರು ಪಾಕಿಸ್ತಾನದ ಪಾಕ ಪದ್ಧತಿಯ ಮಹಾನ್ ಅಭಿಮಾನಿಯಾಗಿದ್ದಾರೆ.
ಉತ್ತಮ ಆಹಾರದ ರುಚಿಯನ್ನು ಅನುಭವಿಸಲು ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ತಮ್ಮ ಅಭಿಮಾನಿಯೊಬ್ಬರಿಗೆ ಧೋನಿ ಸಲಹೆ ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಚೆನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಅವರು ತಮಗೆ ಉತ್ತಮ ಆಹಾರಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿ ಎಂದು ಅಭಿಮಾನಿಯೊಬ್ಬರಿಗೆ ಸಲಹೆ ನೀಡಿದ್ದಾರೆ.
ಅಲ್ಲಿ ಒಳ್ಳೆಯ ಆಹಾರ ಇದೆ ಎಂದು ಹೇಳಿದರೂ ನಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಅಭಿಮಾನಿ ಸಭ್ಯ ರೀತಿಯಲ್ಲಿ ಪ್ರತಿಕ್ರಿಯಿಸಿದರು.
ಧೋನಿ ತಮ್ಮ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದರು. ಅಲ್ಲಿ ಅವರು ಭಾರತದ ಏಕದಿನ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
2024ರ ಐಪಿಎಲ್ ಆವೃತ್ತಿಯ ಮೊದಲು ಧೋನಿ ಸಂಪೂರ್ಣವಾಗಿ ಫಿಟ್ ಆಗುತ್ತಾರೆಂಬ ಕುರಿತು ನಾನು ಆಶಾವಾದಿಯಾಗಿದ್ದೇನೆ. ನಮ್ಮ ತಂಡದ ನಾಯಕ ಮೊಣಕಾಲಿನ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ. ಅವರು ಶೀಘ್ರವೇ ನೆಟ್ ಪಾಕ್ಸಿಸ್ ಆರಂಭಿಸಲಿದ್ದಾರೆ ಎಂದು ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…