ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಇನ್ನು ಟೀಂ ಇಂಡಿಯಾ ಆಟಗಾರರು ಇಂದು ವೆಸ್ಟ್ ಇಂಡೀಸ್‌ನಿಂದ ಭಾರತಕ್ಕೆ ಬಂದಿಳಿದಿದ್ದಾರೆ.
ಭಾರತಕ್ಕೆ ಬಂದ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು. ಬಳಿಕ ಮೋದಿ ಟೀಂ ಇಂಡಿಯಾ ಆಟಗಾರರ ಜೊತೆ ಸಂವಾದ ನಡೆಸಿದರು.
ಇದೇ ವೇಳೆ ವಿಮಾನಯಾನ ಸಂಸ್ಥೆ ವಿಸ್ತಾರ ಏರ್‌ಲೈನ್ಸ್ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಿಗೆ ವಿಶ್ವಕಪ್ ಜಯಿಸಿದ್ದಕ್ಕಾಗಿ ವಿಶೇಷ ಗೌರವ ಸಲ್ಲಿಸಿದೆ.
ದೆಹಲಿಯಿಂದ ಮುಂಬೈ ಆಗಮಿದ ವಿಮಾನ UK1845 ಇದಾಗಿದ್ದು, ವಿರಾಟ್ ಕೊಹ್ಲಿಯ ಜೆರ್ಸಿ ನಂಬರ್ 18 ಹಾಗೂ ರೋಹಿತ್ ಜೆರ್ಸಿ ನಂಬರ್ 45ನ್ನು ಜೋಡಿಸಿ ಹೇಳುವ ಮೂಲಕ ಟೀಂ ಇಂಡಿಯಾ ಲೆಜೆಂಡ್ಸ್‌ಗೆ ಟ್ರಿಬ್ಯೂಟ್ ನೀಡಿದೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ವಿಸ್ತಾರ ಮಾಹಿತಿ ಹಂಚಿಕೊಂಡಿದ್ದು, UK1845 #staytuned ಎಂದು ಹ್ಯಾಷ್‌ಟ್ಯಾಗ್ ಬಳಸಿ ಗೌರವಿಸಿದೆ. ಸದ್ಯ ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…