ಮುಂಬೈ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಬಿಸಿಸಿಐ ಮುಖ್ಯ ಕೋಚ್ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅವರು ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ.
ಏಕದಿನ ವಿಶ್ವಕಪ್ 2023 ರ ನಂತರ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾರತ ತಂಡದೊಂದಿಗೆ ತನ್ನ ಎರಡು ವರ್ಷಗಳ ಒಪ್ಪಂದವನ್ನು ವಿಸ್ತರಿಸಲು ಆಸಕ್ತಿ ತೋರಿಸುತ್ತಿಲ್ಲ ಹೀಗಾಗಿ ಪ್ರಸ್ತುತ ಎಸ್ಸಿಎ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಅವರನ್ನು ದ್ರಾವಿಡ್ ಬದಲಿಗೆ ಮುಖ್ಯ ಕೋಚ್ ಆಗಿ ಆಯ್ಕೆ ಆಗಲಿದ್ದಾರೆ ಎನ್ನಲಾಗಿದೆ.
ಸದ್ಯ ವೈಜಾಗ್‌ನಲ್ಲಿ ಆರಂಭವಾಗಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20I ಸರಣಿಗೆ ದ್ರಾವಿಡ್ ಅವರ ಆಪ್ತ ಸ್ನೇಹಿತ ಲಕ್ಷ್ಮಣ್ ಕೋಚ್ ಆಗಿ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ಲಕ್ಷ್ಮಣ್, ಮುಖ್ಯ ಕೋಚ್ ಸ್ಥಾನಕ್ಕೆ ಆಸಕ್ತಿ ತೋರಿಸಿದ್ದಾರಂತೆ. ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ.
ಬಿಸಿಸಿಐ ಮುಖ್ಯಸ್ಥರನ್ನು ಭೇಟಿಯಾದ ಲಕ್ಷ್ಮಣ್!
ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‌ನಲ್ಲಿನ ಸೋಲು ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸಿದೆ. ”ಲಕ್ಷ್ಮಣ್ ಅವರು ಕೋಚ್ ಸ್ಥಾನಕ್ಕೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ಸಮಯದಲ್ಲಿ, ಲಕ್ಷ್ಮಣ್ ಬಿಸಿಸಿಐನ ಉನ್ನತ ಮುಖ್ಯಸ್ಥರನ್ನು ಭೇಟಿ ಮಾಡಲು ಅಹ್ಮದಾಬಾದ್‌ಗೆ ಕೂಡ ತೆರಳಿದ್ದರು. ಟೀಮ್ ಇಂಡಿಯಾ ಕೋಚ್ ಆಗಿ ದೀರ್ಘಾವಧಿಯ ಒಪ್ಪಂದಕ್ಕೆ ಲಕ್ಷ್ಮಣ್ ಸಹಿ ಹಾಕುವ ಸಾಧ್ಯತೆಯಿದೆ ಮತ್ತು ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಖಾಯಂ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ,” ಎಂದು ಬಿಸಿಸಿಐ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದೆ.