ಕ್ರೀಡೆ

ಲಕ್ಷ್ಮಣ್‌ ಹೆಗಲಿಗೆ ಭಾರತ ಕ್ರಿಕೆಟ್‌ ತಂಡದ ಜವಬ್ಧಾರಿ !

ಮುಂಬೈ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್ ಬಿಸಿಸಿಐ ಮುಖ್ಯ ಕೋಚ್ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅವರು ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ.

ಏಕದಿನ ವಿಶ್ವಕಪ್ 2023 ರ ನಂತರ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾರತ ತಂಡದೊಂದಿಗೆ ತನ್ನ ಎರಡು ವರ್ಷಗಳ ಒಪ್ಪಂದವನ್ನು ವಿಸ್ತರಿಸಲು ಆಸಕ್ತಿ ತೋರಿಸುತ್ತಿಲ್ಲ ಹೀಗಾಗಿ ಪ್ರಸ್ತುತ ಎಸ್​ಸಿಎ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಅವರನ್ನು ದ್ರಾವಿಡ್ ಬದಲಿಗೆ ಮುಖ್ಯ ಕೋಚ್ ಆಗಿ ಆಯ್ಕೆ ಆಗಲಿದ್ದಾರೆ ಎನ್ನಲಾಗಿದೆ.
ಸದ್ಯ ವೈಜಾಗ್‌ನಲ್ಲಿ ಆರಂಭವಾಗಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20I ಸರಣಿಗೆ ದ್ರಾವಿಡ್ ಅವರ ಆಪ್ತ ಸ್ನೇಹಿತ ಲಕ್ಷ್ಮಣ್ ಕೋಚ್ ಆಗಿ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ಲಕ್ಷ್ಮಣ್, ಮುಖ್ಯ ಕೋಚ್ ಸ್ಥಾನಕ್ಕೆ ಆಸಕ್ತಿ ತೋರಿಸಿದ್ದಾರಂತೆ. ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ.

ಬಿಸಿಸಿಐ ಮುಖ್ಯಸ್ಥರನ್ನು ಭೇಟಿಯಾದ ಲಕ್ಷ್ಮಣ್‌!
ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‌ನಲ್ಲಿನ ಸೋಲು ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸಿದೆ. ”ಲಕ್ಷ್ಮಣ್ ಅವರು ಕೋಚ್ ಸ್ಥಾನಕ್ಕೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ಸಮಯದಲ್ಲಿ, ಲಕ್ಷ್ಮಣ್ ಬಿಸಿಸಿಐನ ಉನ್ನತ ಮುಖ್ಯಸ್ಥರನ್ನು ಭೇಟಿ ಮಾಡಲು ಅಹ್ಮದಾಬಾದ್‌ಗೆ ಕೂಡ ತೆರಳಿದ್ದರು. ಟೀಮ್ ಇಂಡಿಯಾ ಕೋಚ್ ಆಗಿ ದೀರ್ಘಾವಧಿಯ ಒಪ್ಪಂದಕ್ಕೆ ಲಕ್ಷ್ಮಣ್‌ ಸಹಿ ಹಾಕುವ ಸಾಧ್ಯತೆಯಿದೆ ಮತ್ತು ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಖಾಯಂ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ,” ಎಂದು ಬಿಸಿಸಿಐ ಟೈಮ್ಸ್‌ ಆಫ್‌ ಇಂಡಿಯಾಗೆ ತಿಳಿಸಿದೆ.

andolanait

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

43 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

56 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

1 hour ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

1 hour ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

1 hour ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

1 hour ago