ಕ್ರೀಡೆ

ಏಕದಿನ ಕ್ರಿಕೆಟ್‌ ದಿಢೀರ್‌ ನಿವೃತ್ತಿ ಘೋಷಿಸಿದ ವಾರ್ನರ್‌!

ನವದೆಹಲಿ : ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಮೂರು ಟೆಸ್ಟ್ ಸರಣಿಯ ನಂತರ ನಿವೃತ್ತರಾಗುವುದಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡದ ಸ್ಪೋಟಕ ಎಡಗೈ ಬ್ಯಾಟರ್ 37 ವರ್ಷದ ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಅಗತ್ಯ ಬಿದ್ದರೆ 2025ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟದಲ್ಲಿ ತಾನು ಭಾಗವಹಿಸುವ ಸಾಧ್ಯತೆಯನ್ನು ಅವರು ಅಲ್ಲಗಳೆದಿಲ್ಲ.

ಬುಧವಾರ ತಮ್ಮ ತವರಾದ ಸಿಡ್ನಿಯಲ್ಲಿ ಪಾಕ್‌ ವಿರುದ್ಧ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ತಮ್ಮ ಕೊನೆಯ 112ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ಕಣಕ್ಕಿಳಿಯಲಿದ್ದಾರೆ.

ತಮ್ಮ ಟೆಸ್ಟ್ ಕ್ರಿಕೆಟ್ ಜೀವನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಡೇವಿಡ್ ವಾರ್ನರ್, 44.58 ರನ್ ಸರಾಸರಿಯೊಂದಿಗೆ 8,695 ರನ್ ಗಳನ್ನು ಕಲೆ ಹಾಕಿದ್ದಾರೆ. ಈ ಪೈಕಿ 26 ಶತಕಗಳು ಹಾಗೂ 36 ಅರ್ಧ ಶತಕಗಳಿವೆ.

ಸಿಡ್ನಿ ಕ್ರಿಕೆಟ್ ಗೌಂಡ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕ್ರಿಕೆಟಿಕ, ಏಕದಿನ ಕ್ರಿಕೆಟ್‌ನಿಂದಲೂ ನಿವೃತ್ತರಾಗುತ್ತಿರುವುದನ್ನು ದೃಢಪಡಿಸಿದರು. 2009ರಲ್ಲಿ ಅವರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದಂದಿನಿಂದ ಇದುವರೆಗೂ ಅವರು ಆಸ್ಟ್ರೇಲಿಯಾ ತಂಡದ ಅವಿಭಾಜ್ಯ ಅಂಗವಾಗಿದ್ದರು. 2015 ಹಾಗೂ 2023ರಲ್ಲಿ ವಿಶ್ವಕಪ್ ಜಯಿಸಿದ ಆಸ್ಟ್ರೇಲಿಯಾ ತಂಡದಲ್ಲಿ ವಾರ್ನರ್‌ ಇದ್ದರು.

ಇದುವರೆಗೆ 161 ಏಕದಿನ ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್, 45.30 ರನ್ ಸರಾಸರಿಯಲ್ಲಿ ಒಟ್ಟು 6,932 ರನ್ ಗಳಿಸಿದ್ದಾರೆ. ಇದರಲ್ಲಿ 22 ಶತಕಗಳು ಸೇರಿವೆ. ಆಸ್ಟ್ರೇಲಿಯಾ ತಂಡದ ಪರ ಅತಿ ಹೆಚ್ಚು ಶತಕಗಳನ್ನು ಬಾರಿಸಿರುವವರ ಪೈಕಿ ರಿಕಿ ಪಾಂಟಿಂಗ್ ನಂತರ ಡೇವಿಡ್ ವಾರ್ನರ್ ಎರಡನೆಯ ಸ್ಥಾನದಲ್ಲಿದ್ದಾರೆ. ರಿಕಿ ಪಾಂಟಿಂಗ್ ಒಟ್ಟು 30 ಶತಕಗಳನ್ನು ಗಳಿಸಿದ್ದಾರೆ.

ಡೇವಿಡ್ ವಾರ್ನರ್ ಟಿ-20 ಮಾದರಿಯ ಕ್ರಿಕೆಟ್‌ನಲ್ಲಿ ತಮ್ಮ ಆಟ ಮುಂದುವರಿಸಲಿದ್ದು, ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ನಡೆಯಲಿರುವ 2024ರ ಟಿ-20 ವಿಶ್ವಕಪ್ ನಲ್ಲಿ ಆಡುವ ಗುರಿ ಹೊಂದಿದ್ದಾರೆ.

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

3 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

4 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

5 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

6 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

6 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

6 hours ago