ನವದೆಹಲಿ : ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಮೂರು ಟೆಸ್ಟ್ ಸರಣಿಯ ನಂತರ ನಿವೃತ್ತರಾಗುವುದಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡದ ಸ್ಪೋಟಕ ಎಡಗೈ ಬ್ಯಾಟರ್ 37 ವರ್ಷದ ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ಅಗತ್ಯ ಬಿದ್ದರೆ 2025ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟದಲ್ಲಿ ತಾನು ಭಾಗವಹಿಸುವ ಸಾಧ್ಯತೆಯನ್ನು ಅವರು ಅಲ್ಲಗಳೆದಿಲ್ಲ.
ಬುಧವಾರ ತಮ್ಮ ತವರಾದ ಸಿಡ್ನಿಯಲ್ಲಿ ಪಾಕ್ ವಿರುದ್ಧ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ತಮ್ಮ ಕೊನೆಯ 112ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ಕಣಕ್ಕಿಳಿಯಲಿದ್ದಾರೆ.
ತಮ್ಮ ಟೆಸ್ಟ್ ಕ್ರಿಕೆಟ್ ಜೀವನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಡೇವಿಡ್ ವಾರ್ನರ್, 44.58 ರನ್ ಸರಾಸರಿಯೊಂದಿಗೆ 8,695 ರನ್ ಗಳನ್ನು ಕಲೆ ಹಾಕಿದ್ದಾರೆ. ಈ ಪೈಕಿ 26 ಶತಕಗಳು ಹಾಗೂ 36 ಅರ್ಧ ಶತಕಗಳಿವೆ.
ಸಿಡ್ನಿ ಕ್ರಿಕೆಟ್ ಗೌಂಡ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕ್ರಿಕೆಟಿಕ, ಏಕದಿನ ಕ್ರಿಕೆಟ್‌ನಿಂದಲೂ ನಿವೃತ್ತರಾಗುತ್ತಿರುವುದನ್ನು ದೃಢಪಡಿಸಿದರು. 2009ರಲ್ಲಿ ಅವರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದಂದಿನಿಂದ ಇದುವರೆಗೂ ಅವರು ಆಸ್ಟ್ರೇಲಿಯಾ ತಂಡದ ಅವಿಭಾಜ್ಯ ಅಂಗವಾಗಿದ್ದರು. 2015 ಹಾಗೂ 2023ರಲ್ಲಿ ವಿಶ್ವಕಪ್ ಜಯಿಸಿದ ಆಸ್ಟ್ರೇಲಿಯಾ ತಂಡದಲ್ಲಿ ವಾರ್ನರ್ ಇದ್ದರು.
ಇದುವರೆಗೆ 161 ಏಕದಿನ ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್, 45.30 ರನ್ ಸರಾಸರಿಯಲ್ಲಿ ಒಟ್ಟು 6,932 ರನ್ ಗಳಿಸಿದ್ದಾರೆ. ಇದರಲ್ಲಿ 22 ಶತಕಗಳು ಸೇರಿವೆ. ಆಸ್ಟ್ರೇಲಿಯಾ ತಂಡದ ಪರ ಅತಿ ಹೆಚ್ಚು ಶತಕಗಳನ್ನು ಬಾರಿಸಿರುವವರ ಪೈಕಿ ರಿಕಿ ಪಾಂಟಿಂಗ್ ನಂತರ ಡೇವಿಡ್ ವಾರ್ನರ್ ಎರಡನೆಯ ಸ್ಥಾನದಲ್ಲಿದ್ದಾರೆ. ರಿಕಿ ಪಾಂಟಿಂಗ್ ಒಟ್ಟು 30 ಶತಕಗಳನ್ನು ಗಳಿಸಿದ್ದಾರೆ.
ಡೇವಿಡ್ ವಾರ್ನರ್ ಟಿ-20 ಮಾದರಿಯ ಕ್ರಿಕೆಟ್‌ನಲ್ಲಿ ತಮ್ಮ ಆಟ ಮುಂದುವರಿಸಲಿದ್ದು, ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ನಡೆಯಲಿರುವ 2024ರ ಟಿ-20 ವಿಶ್ವಕಪ್ ನಲ್ಲಿ ಆಡುವ ಗುರಿ ಹೊಂದಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…